ಸುಖ ಸಾಮರಸ್ಯ ಬಾಳಿಗೆ ಶ್ರೀ ಜಗದ್ಗುರು ರೇಣುಕಾಚಾರ್ಯರ ಚಿಂತನೆಗಳು ದಾರಿದೀಪ ; ರಂಭಾಪುರಿ ಶ್ರೀಗಳು

ಎನ್.ಆರ್.ಪುರ: ಮನುಷ್ಯ ಜೀವನದಲ್ಲಿ ಸುಖ ಶಾಂತಿ ಯಾವಾಗಲೂ ಬಯಸುತ್ತಾನೆ. ಆ ಸುಖದ ದಾರಿ ಪ್ರಾಪ್ತವಾಗಲು ಆದರ್ಶಗಳನ್ನು ಪರಿಪಾಲಿಸಬೇಕು. ಸುಖ ಸಾಮರಸ್ಯ ಬಾಳಿಗೆ ಶ್ರೀ ಜಗದ್ಗುರು ರೇಣುಕಾಚಾರ್ಯರು ಬೋಧಿಸಿದ ಚಿಂತನೆಗಳು ಸರ್ವರಿಗೂ ದಾರಿದೀಪವಾಗಿವೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಶುಕ್ರವಾರ ಶ್ರೀ ಪೀಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

ಮನುಷ್ಯ ಎಷ್ಟೇ ಎತ್ತರಕ್ಕೆ ಬೆಳೆದರೂ ಮೂಲ ಸಂಸ್ಕೃತಿ ಮರೆಯಬಾರದು. ಮೂಲ ಮರೆತರೆ ಬದುಕಿನಲ್ಲಿ ಸೋಲು ನಿಶ್ಚಿತ. ಮನಸ್ಸು ಪರಿಶುದ್ಧವಾಗಿದ್ದರೆ ಸಂತೋಷ ನೆರಳಿನಂತೆ ನಮ್ಮನ್ನು ಹಿಂಬಾಲಿಸುತ್ತದೆ. ಸುತ್ತಲೂ ಕವಿದಿರುವ ಅಜ್ಞಾನವೆಂಬ ಕತ್ತಲೆಯೊಳಗೆ ಪ್ರೀತಿ ವಾತ್ಸಲ್ಯದ ದೀಪ ಹಚ್ಚಬೇಕು. ಮೌಢ್ಯ ಎಂಬ ಅಂಧಕಾರ ತೊಲಗಿಸಿ ಜ್ಞಾನ ಎಂಬ ದೀಪ ಬೆಳಗಿಸಿದ ಶ್ರೇಯಸ್ಸು ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ ಸಲ್ಲುತ್ತದೆ. ಸತ್ಕಾರ್ಯಗಳಿಂದ ಮನುಷ್ಯನ ಅಂತರಂಗ ಪರಿಶುದ್ಧವಾಗುತ್ತದೆ. ಸತ್ಯ ಶುದ್ಧ ಕಾಯಕದಿಂದ ಬದುಕು ಉನ್ನತಿಯಾಗುತ್ತದೆ ಎಂಬ ಅವರ ವಿಚಾರ ಧಾರೆ ಎಂದೆಂದಿಗೂ ಸತ್ಯ. ವೀರಶೈವ ಧರ್ಮವೃಕ್ಷದ ತಾಯ್ಬೇರು ಶ್ರೀ ಜಗದ್ಗುರು ರೇಣುಕಾಚಾರ್ಯರು. ನೊಂದವರ ಬೆಂದವರ ಬಾಳಿಗೆ ಬೆಳಕು ತೋರಿದ ಪರಮಾಚಾರ್ಯರು. ಜಾತಿಗಿಂತ ನೀತಿ ತತ್ವಕ್ಕಿಂತ ಆಚರಣೆ ಮಾತಿಗಿಂತ ಕೃತಿ ಬೋಧನೆಗಿಂತ ಸಾಧನೆ ದಾನಕ್ಕಿಂತ ದಾಸೋಹ ಚರಿತ್ರೆಗಿಂತ ಚಾರಿತ್ರ್ಯ ಬಹು ದೊಡ್ಡ ಆಸ್ತಿಯೆಂದು ಅರುಹಿ ಸಕಲ ಸಮುದಾಯದ ಉನ್ನತಿಗಾಗಿ ಸದಾ ಶ್ರಮಿಸಿದ ಕೀರ್ತಿ ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ ಸಲ್ಲುತ್ತದೆ. ಶಿವನ ಸದ್ಯೋಜಾತ ಮುಖದಿಂದ ಆವಿರ್ಭವಿಸಿ ಫಾಲ್ಗುಣ ಶುದ್ಧ ತ್ರಯೋದಶಿಯಂದು ಕೊಲನಪಾಕ ಸ್ವಯಂಭು ಶ್ರೀ ಸೋಮೇಶ್ವರ ಮಹಾಲಿಂಗದಿಂದ ಅವತರಿಸಿ ಆಧ್ಯಾತ್ಮ ಲೋಕಕ್ಕೆ ಅಮೂಲ್ಯ ಕೊಡುಗೆ ಕೊಟ್ಟ ಪರಮಾಚಾರ್ಯರ ಆದರ್ಶಗಳನ್ನು ಅಳವಡಿಸಿಕೊಂಡು ಶ್ರೇಷ್ಠವಾದ ಬದುಕನ್ನು ಕಟ್ಟಿಕೊಳ್ಳಬೇಕಾಗಿದೆ ಎಂದರು.

ಇದೇ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ಅಂಗವಿಕಲೆ ಡಾ|| ಮಹಾಜಬೀನ ಎಸ್.ಮಧುರಕರ ಇವರಿಗೆ 2024ನೇ ಸಾಲಿನ ಶ್ರೀ ಜಗದ್ಗುರು ರೇಣುಕಾಚಾರ್ಯ ಅತ್ಯುನ್ನತ ಪ್ರಶಸ್ತಿಯನ್ನು ಪ್ರದಾನ ಮಾಡಿ ಶುಭ ಹಾರೈಸಿದರು.

ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಪ್ರಶಸ್ತಿ ವಾಚನ ಮಾಡಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ||ಮಹಾಜಬೀನ ಮಾತನಾಡಿ, ನನ್ನ ಜೀವನದ ಇತಿಹಾಸದಲ್ಲಿ ಅವಿಸ್ಮರಣೀಯವಾಗಿ ಉಳಿಯುವ ಪುಣ್ಯ ದಿನ. ವೈದ್ಯಕೀಯ ಕ್ಷೇತ್ರದಲ್ಲಿ ಶ್ರಮಿಸಿದ ಪ್ರತಿಫಲವಾಗಿ ಗುರು ಪೀಠದಿಂದ ಅತ್ಯುನ್ನತ ಪ್ರಶಸ್ತಿ ಪ್ರಾಪ್ತವಾಗಿರುವುದು ಸಂತೋಷ ತಂದಿದೆ.

ಅಂಗವಿಕಲರ ಬಾಳಿನ ಉಜ್ವಲತೆಗಾಗಿ ಸದಾ ಶ್ರಮಿಸುವ ಸಂಕಲ್ಪ ಕೈಕೊಂಡು ಕಾರ್ಯ ಮಾಡುವೆ. ಗುರು ಹಿರಿಯರ ಆಶೀರ್ವಾದ ಜನ್ಮ ನೀಡಿದ ತಂದೆ ತಾಯಿ ಅವರ ಕೃಪಾಕಾರುಣ್ಯದ ಆಶೀರ್ವಾದ ಸದಾ ನನ್ನ ಬಾಳಿಗೆ ನೆರಳಾಗಿರಲೆಂದು ಪ್ರಾರ್ಥಿಸಿ ಅಂಗವಿಕಲತೆ ಒಂದು ಶಾಪವಲ್ಲ. ಅದನ್ನು ಮೆಟ್ಟಿ ನಿಂತು ಸಾಧಿಸುವ ಛಲ ಇರಲಿ. 2016ರಲ್ಲಿ ದಾವಣಗೆರೆಯಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳು ಆಶೀರ್ವದಿಸಿದ ನಂತರ ತಮ್ಮ ಜೀವನದಲ್ಲಿ ಉನ್ನತ ಬದಲಾವಣೆಯಾಗಿದೆ ಎಂದರು.

ಗೌರಿಗದ್ದೆ ಅವಧೂತ ಆಶ್ರಮದ ವಿನಯ ಗುರೂಜಿ ಮಾತನಾಡಿ ರಂಭಾಪುರಿ ಪೀಠದ ಧರ್ಮ ಆದರ್ಶ ಮತ್ತು ಶ್ರೀ ಜಗದ್ಗುರು ರೇಣುಕಾಚಾರ್ಯರ ವಿಶ್ವ ಬಂಧುತ್ವದ ವಿಚಾರ ಧಾರೆಗಳು ನಮ್ಮೆಲ್ಲರ ಬಾಳಿಗೆ ಬೆಳಕು ನೀಡುತ್ತವೆ ಎಂದರು. ಅಮ್ಮಿನಭಾವಿ ಪಂಚಗೃಹ ಹಿರೇಮಠದ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ರೇಣುಕ ಅನ್ನುವ ನಾಮಾಂಕಿತದಲ್ಲಿ ಅದ್ಭುತ ಶಕ್ತಿಯಿದೆ. ಜೀವನ ಸಂಕುಲನದ ಉನ್ನತಿಗಾಗಿ ಅವರು ಕೊಟ್ಟ ವಿಚಾರ ಧಾರೆಗಳು ಎಂದೆಂದಿಗೂ ಅಮರವಾಗಿವೆ. ಜಗದ ಕತ್ತಲೆ ಕಳೆಯಲು ಸೂರ್ಯ ಬೇಕು. ಬದುಕಿನ ಕತ್ತಲೆ ಕಳೆಯಲು ಶ್ರೀ ಜಗದ್ಗುರು ರೇಣುಕಾಚಾರ್ಯರ ಚಿಂತನೆಗಳ ಪರಿಪಾಲನೆ ಅವಶ್ಯಕವಾಗಿವೆ ಎಂದರು.

ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡರು ಸಮಾರಂಭವನ್ನು ಉದ್ಘಾಟಿಸಿದರು. ಎಮ್ಮಿಗನೂರು ವಾಮದೇವ ಮಹಂತ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಿದ್ದರು. ಪ್ರಾಸ್ತಾವಿಕ ನುಡಿದರು. ಮುಕ್ತಿಮಂದಿರದ ವಿಮಲ ರೇಣುಕ ಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು ಸಂಗಮೇಶ ಉತ್ತಂಗಿ ವಿರಚಿತ ನಾದಲೀಲೆ ಕೃತಿ ಬಿಡುಗಡೆ ಮಾಡಿದರು.

ಸುಳ್ಳ, ಮಳಲಿ, ನೆಗಳೂರು, ತಡವಲಗಾ, ಮಸ್ಕಿ, ಅಚಲೇರಿ, ದೇವಾಪುರ, ಬೀರೂರು, ಕಾರ್ಜವಳ್ಳಿ, ಕಡೆನಂದಿಹಳ್ಳಿ, ಚಳಗೇರಿ, ಸಂಗೊಳ್ಳಿ, ಚನ್ನಗಿರಿ, ಕಲಾದಗಿ, ಮದ್ದರಕಿ, ಬಿಳಕಿ, ಕಡೆಚೂರು, ದೇವರಗುಡ್ಡ, ಕೊಡನರು, ಕೆಂಭಾವಿ, ದೋರನಹಳ್ಳಿ, ಶ್ರೀನಿವಾಸ ಸರಡಗಿ, ಹಿರೇವಡ್ಡಟ್ಟಿ, ನಾಗಲಪುರ, ತೊನಸನಹಳ್ಳಿ, ಹಿರೆಮಲ್ಲನಕೇರಿ, ಅಡ್ನೂರು, ಚಿಮ್ಮಲಗಿ, ಸಾಸನೂರು, ಸಿಂದಗಿ, ತಡವಲಗಾ, ಧನಗೂರು, ದೇವರಹಿಪ್ಪರಗಿ, ಹೆಬ್ಬಾಳ, ಚಾಮರಾಜನಗರ, ಮಾವಿನಹಳ್ಳಿ, ಹಿರೇಮಲ್ಲನಕೇರಿ ಶ್ರೀಗಳು ಪಾಲ್ಗೊಂಡಿದ್ದರು.

ಲೆಕ್ಕ ಪರಿಶೋಧಕ ಎಂ.ಸದಾಶಿವಪ್ಪ ಬೆಂಗಳೂರು, ಮಮತಾ ನಾಗರಾಜ್ ಕೂಡ್ಲಿಗೆರೆ, ಚಿಕ್ಕಮಗಳೂರಿನ ಹೆಚ್.ಎಂ. ಲೋಕೇಶ, ಕೆ.ಆರ್.ಪ್ರಕಾಶ ಕೋಣಂದೂರು ಇವರಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರುರಕ್ಷೆ ನೀಡಿ ಆಶೀರ್ವದಿಸಿದರು.

ಶಿವಮೊಗ್ಗದ ಕು. ಜಿ.ಜಿ. ರಕ್ಷಿತಾ ಭರತ ನಾಟ್ಯ ಪ್ರದರ್ಶಿಸಿದರು. ಹುಬ್ಬಳ್ಳಿಯ ಪ್ರಕಾಶ ಬೆಂಡಿಗೇರಿ ಸ್ವಾಗತಿಸಿದರು. ಗದಗಿನ ಸಂಗಮೇಶ ಉತ್ತಂಗಿ ಇವರಿಂದ ಸಂಗೀತ ಜರುಗಿತು. ಶಿವಮೊಗ್ಗದ ಶಾಂತಾ ಆನಂದ ನಿರೂಪಿಸಿದರು.

ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಹಗರಿಬೊಮ್ಮನಹಳ್ಳಿ ಶಾಸಕ ನೇಮಿನಾತ ನಾಯ್ಕ ಶ್ರೀ ಪೀಠಕ್ಕೆ ಆಗಮಿಸಿ ಶ್ರೀ ರಂಭಾಪುರಿ ಜಗದ್ಗುರುಗಳ ಅಶೀರ್ವಾದ ಪಡೆದರು.

ರಥೋತ್ಸವ:
ಸಮಾರಂಭದ ನಂತರ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವಕ್ಕೆ ಶ್ರೀ ರಂಭಾಪುರಿ ಜಗದ್ಗುರುಗಳು ಚಾಲನೆ ನೀಡಿದರು. ರಥೋತ್ಸವ ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಸಂಭ್ರಮದಿಂದ ಜರುಗಿತು.

Malnad Times

Share
Published by
Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

10 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

14 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

14 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

16 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

17 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

24 hours ago