ಚಿಕ್ಕಮಗಳೂರು : ಹೆಲ್ಮೆಟ್ (Helmet) ವಿಚಾರವಾಗಿ ವಕೀಲರೊಬ್ಬರ (Lawyer) ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಚಿಕ್ಕಮಗಳೂರು (Chikkamagaluru) ನಗರ ಪೊಲೀಸ್ ಠಾಣೆಯ (Police station) ಪಿಎಸ್ಐ ಮಹೇಶ್ ಪೂಜಾರಿ ಸೇರಿದಂತೆ ಆರು ಮಂದಿ ಸಿಬ್ಬಂದಿಯನ್ನು ಅಮಾನತುಗೊಳಿಸಿ ಎಸ್ಪಿ ವಿಕ್ರಂ ಅಮ್ಟೆ ಆದೇಶಿಸಿದ್ದಾರೆ.
ಹೆಲ್ಮೆಟ್ ವಿಚಾರವಾಗಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ವಕೀಲ ಪ್ರೀತಮ್ ಮೇಲೆ ಹಲ್ಲೆ ನಡೆಸಲಾಗಿತ್ತು. ಠಾಣೆಯಲ್ಲಿ ವಕೀಲ ಪ್ರೀತಮ್ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆ ಠಾಣೆ ಮುಂದೆ ಜಮಾಯಿಸಿದ್ದ ವಕೀಲರು ಆಕ್ರೋಶ ಹೊರಹಾಕಿದ್ದರು. ಸ್ಥಳಕ್ಕೆ ಆಗಮಿಸಿದ ಎಸ್ಪಿ ವಿಕ್ರಂ, ವಿಚಾರಣೆ ನಡೆಸಿದ್ದರು.
ಪಿಎಸ್ಐ ಸೇರಿದಂತೆ ಆರು ಸಿಬ್ಬಂದಿಯನ್ನು ಅಮಾನತು ಮಾಡಿದ್ದಾರೆ. ಹಲ್ಲೆ ಮಾಡಿದ ಪೊಲೀಸರನ್ನ ಬಂಧಿಸುವಂತೆ ಪಟ್ಟು ಹಿಡಿದ ವಕೀಲರು, ಠಾಣೆಯಿಂದ ಎಸ್ಪಿ ತೆರಳದಂತೆ ಅಡ್ಡ ಕುಳಿತಿದ್ದರು.
ಹಲ್ಲೆ ಪ್ರಕರಣ ಸಂಬಂಧ ಆರು ಮಂದಿ ವಿರುದ್ಧ ಐಪಿಸಿ ಸೆಕ್ಷನ್ 307, 324, 506, 504ರ ಅಡಿ ಪ್ರಕರಣ ದಾಖಲಾಗಿದೆ. ಇನ್ನು, ಪೊಲೀಸರ ದೌರ್ಜನ್ಯ ಖಂಡಿಸಿ ಚಿಕ್ಕಮಗಳೂರು ಬಾರ್ ಕೌನ್ಸಿಲ್ ಸದಸ್ಯರು ನಗರದಲ್ಲಿ ಇಂದು ಪ್ರತಿಭಟನೆಗೆ ಕರೆ ನೀಡಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…