19ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ | ಕನ್ನಡ ಭಾಷೆ ಇಲ್ಲದೇ ಹೋದರೆ ಯಾವುದೇ ಸಾಹಿತ್ಯ, ಸಂಸ್ಕೃತಿ, ಕಲಾ ಪ್ರಕಾರ ಗಟ್ಟಿ ಉಳಿಯುವುದಿಲ್ಲ ; ಡಾ. ಮೋಹನ್ ಆಳ್ವ

ಮೂಡಿಗೆರೆ: ಕನ್ನಡ ಭಾಷೆ ಇಲ್ಲದೇ ಹೋದರೆ ಯಾವುದೇ ಸಾಹಿತ್ಯ, ಸಂಸ್ಕೃತಿ, ಕಲಾ ಪ್ರಕಾರ ಗಟ್ಟಿ ಉಳಿಯುವುದಿಲ್ಲ ಎಂದು ಮೂಡಬಿದರೆ ಆಳ್ವಾಸ್ ವಿದ್ಯಾಸಂಸ್ಥೆ ಮುಖ್ಯಸ್ಥ ಡಾ.ಮೋಹನ್ ಆಳ್ವ ಹೇಳಿದರು.

ಅವರು ಶುಕ್ರವಾರ ಪಟ್ಟಣದ ಅಡ್ಯಂತಾಯ ರಂಗ ಮಂದಿರದ ಕವಿ ಲಕ್ಷ್ಮೀಶ ವೇದಿಕೆಯಲ್ಲಿ ಏರ್ಪಡಿಸಿದ್ದ 19ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇತಿಹಾಸ ನೋಡಿದರೆ ಹಳೆಗನ್ನಡದಿಂದ ಹೊಸಗನ್ನಡವರೆಗೆ ಭಾಷೆ, ಸಾಹಿತ್ಯ ಎಲ್ಲವೂ ಬದಲಾವಣೆಗೊಳ್ಳುತ್ತಾ ನಡೆದುಕೊಂಡು ಬಂದಿದೆ. ಅಲ್ಲದೇ ನವೋದಯ, ಪ್ರಗತಿಶೀಲ, ನವ್ಯ ಬಂಡಾಯ ಸಾಹಿತ್ಯ ಸಮ್ಮೇಳನ ಪ್ರಾರಂಭವಾಯಿತು. ಕನ್ನಡ ಮಾಧ್ಯಮ ಶಾಲೆ ಕೂಡ ಬೇಕಾದಷ್ಟು ನಮ್ಮ ನಾಡಿನಲ್ಲಿ ಕಟ್ಟಿದರು. ಆದರೆ ಕಾಲ ಬದಲಾದಂತೆ ಕನ್ನಡ ಮಾಧ್ಯಮ ಶಾಲೆಗಳು ನಶಿಸಿಹೋಗುತ್ತಿದೆ ಎಂದು ಹೇಳಿದರು.

ಒಂದು ಶಾಲೆಗೆ ಓರ್ವ ಕನ್ನಡ ಶಿಕ್ಷಕಿ ಸಿಗುವುದೇ ಕಷ್ಟವಾಗಿದೆ. ಇಂಗ್ಲೀಷ್ ಭಾಷೆ ಅನೇಕ ದೇಶದ ಮೇಲೆ ಸವಾರಿ ಮಾಡಿದೆ. ಆದರೆ ಅನೇಕ ಹೊರ ದೇಶದಲ್ಲಿ ಉನ್ನತ ಶಿಕ್ಷಣ ಆ ದೇಶದ ಮೂಲ ಭಾಷೆಯಲ್ಲಿಯೇ ನಡೆಯುತ್ತಿದೆ. ಇದು ನಮ್ಮ ದೇಶದಲ್ಲೂ ಆಗಬೇಕು. ರಾಜ್ಯದಲ್ಲಿರುವ ಎಲ್ಲಾ ಪ್ರಾದೇಶಿಕ ಭಾಷೆ ಸೋಲಬಾರದು. ಈಗಾಗಲೇ ಕನ್ನಡ ಭಾಷೆ ಮುಂದೆ ಕೊಂಡೊಯ್ಯುವಲ್ಲಿ ಆಳುವ ಸರ್ಕಾರಗಳು ವಿಫಲವಾಗಿದೆ. ಇನ್ನಾದರೂ ಖಾಸಗಿ ಶಾಲೆಗೆ ಮೀರಿಸುವಂತಹ ಕನ್ನಡ ಮಾಧ್ಯಮ ಶಾಲೆ ಕಟ್ಟಬೇಕು. ಆಗ ಮಾತ್ರ ಮುಂದಿನ ಪೀಳಿಗೆ ಕನ್ನಡ ಭಾಷೆಯ ತೇರನ್ನು ಎಳೆಯಲು ಸಾಧ್ಯ ಎಂದು ಹೇಳಿದರು.

ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ಅವರು ಹೇಮಾಂತರಂಗ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿ, ಬೇರೆ ಜಿಲ್ಲೆಯಲ್ಲಿ ಕಾಣದಂತಹ ವೈಶಿಷ್ಟತೆ ಚಿಕ್ಕಮಗಳೂರು ಜಿಲ್ಲೆಯಲ್ಲಿದೆ. ಇಲ್ಲಿ ಶೃಂಗೇರಿ ಶ್ರೀ ಶಾರದೆ, ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ, ಬಾಬಾಬುಡನ್‌ಗಿರಿ, ದತ್ತಪೀಠ, ಜೈನರ ಕ್ಷೇತ್ರ ಸೇರಿದಂತೆ ಪೌರಾಣಿಕ, ಐತಿಹಾಸಿಕವಾಗಿ ಹೆಸರುವಾಸಿಯಾಗಿದೆ. ಅಲ್ಲದೇ ಋಷಿಗಳಿಗೆ ಆಶ್ರಯ ನೀಡಿದ ತಾಣವಾಗಿದೆ. ಇಂತಹ ಪುಣ್ಯ ಭೂಮಿಯಲ್ಲಿ ತನ್ನ ಅವದಿಯಲ್ಲಿ ಅಖಿಲ ಭಾರತ ಸಮ್ಮೇಳನ ನಡೆಸಲಾಗುವುದು ಎಂದು ಹೇಳಿದರು.

ಸಾಹಿತಿ ಚಟ್ನಳ್ಳಿ ಮಹೇಶ್ ಮಾತನಾಡಿ, ಕ್ನನಡ ಅರಿವು ಹಾಗೂ ಆತ್ಮಾಭಿಮಾನದ ಭಾಷೆಯಾಗಬೇಕು. ಕನ್ನಡ ಭಾಷೆ ಬಗ್ಗೆ ನಿರ್ಲಕ್ಷ್ಯ ಮಾಡಿದರೆ ಪಾಪ ಮಾಡಿದ ಹಾಗೆ. ಇಲ್ಲಿನ ಕನ್ನಡಿಗರು ಹೊರ ದೇಶದಲ್ಲಿ ಕನ್ನಡ ಕೂಟಗಳನ್ನು ಕಟ್ಟಿದ್ದಾರೆ. ಆದರೆ ಇಲ್ಲಿ ಸಾಧ್ಯವಾಗದಿರುವುದು ದುರಂತ. ಕನ್ನಡ ಭಾಷೆ ಉಳಿಸುವ ಇಚ್ಚಾಸಕ್ತಿ ಕನ್ನಡಿಗರಲ್ಲಿ ಮೂಡಬೇಕೆಂದು ಹೇಳಿದರು.

ಇದಕ್ಕೂ ಮುನ್ನ ಸಮ್ಮೇಳನಾಧ್ಯಕ್ಷ ಹಳೆಕೋಟೆ ರಮೇಶ್ ಅವರನ್ನು ದಿವ್ಯರಥದಲ್ಲಿ ಕುಳ್ಳಿರಿಸಿ, ವಿವಿಧ ವಾದ್ಯ ಮತ್ತು ಕಲಾತಂಡಗಳು ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮ್ಮೇಳನಾಧ್ಯಕ್ಷ ಹಳೆಕೋಟೆ ರಮೇಶ್ ವಹಿಸಿದ್ದರು, ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್, ತಾಲೂಕು ಅಧ್ಯಕ್ಷ ಎಚ್.ಎಂ.ಶಾಂತಕುಮಾರ್, ಸಾಹಿತಿ ಡಾ.ಬೆಳವಾಡಿ ಮಂಜುನಾಥ್, ಕಾರ್ಯಾಧ್ಯಕ್ಷ ಬಿ.ಎಸ್. ಜಯರಾಂ, ಕೋಶಾಧ್ಯಕ್ಷ ಜೆ.ಎಸ್. ರಘು, ಸಂಸ್ಕೃತಿ ಚಿಂತಕ ಮಂಚೇಗೌಡ, ಪ್ರಧಾನ ಸಂಚಾಲಕ ಗಣೇಶ್ ಮಗ್ಗಲಮಕ್ಕಿ ಸೇರಿದಂತೆ ವಿವಿಧ ತಾಲೂಕಿನ ಕಸಾಪ ಅಧ್ಯಕ್ಷರು ಉಪಸ್ಥಿತರಿದ್ದರು.

Malnad Times

Share
Published by
Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago