48 ಗಂಟೆಯೊಳಗೆ ಮನೆಗಳ್ಳತನ ಪ್ರಕರಣ ಭೇದಿಸಿದ ಪೊಲೀಸರು

0 502

ಚಿಕ್ಕಮಗಳೂರು: ನಗರ ಠಾಣಾ ವ್ಯಾಪ್ತಿಯ ಕಲ್ಯಾಣನಗರ ಬಡಾವಣೆಯಲ್ಲಿ ಇತ್ತೀಚೆಗೆ ನಡೆದಿದ್ದ ಮನೆಗಳ್ಳತನ ಪ್ರಕರಣವನ್ನು 48 ಗಂಟೆಯೊಳಗೆ ಭೇದಿಸಿರುವ ನಗರ ಠಾಣಾ ಪೊಲೀಸರು ಕಳವು ಮಾಲು, ನಗದು ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.

ನಗರ ಠಾಣಾ ವ್ಯಾಪ್ತಿಯ ಕಲ್ಯಾಣನಗರ ಬಡಾವಣೆಯಲ್ಲಿ ಮನೆಗೆ ನುಗ್ಗಿದ್ದ ಬಾಲಕರು ಸೇರಿದಂತೆ ಮತ್ತೆರಡು ಜನ ಆರೋಪಿಗಳು ಎರಡೂವರೆ ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದರು.

ಪ್ರಕರಣ ದಾಖಲಿಸಿಕೊಂಡು ಕಳ್ಳರ ಜಾಡು ಹಿಡಿದು ಹೊರಟ ಪೊಲೀಸರು ದಾವಣಿಗೆರೆಯಲ್ಲಿ ಆರೋಪಿಗಳನ್ನು ಬಂಧಿಸಿ ಕಳವು ಮಾಡಿದ ಚಿನ್ನಾಭರಣ ಮತ್ತು ಕಳವು ಮಾಡಲು ಬಳಸಿದ್ದ ಅಂದಾಜು 15 ಲಕ್ಷ ರೂ. ಮೌಲ್ಯದ ಕಾರು ವಶಪಡಿಸಿಕೊಂಡಿದ್ದಾರೆ.


ಈ ಪ್ರಕರಣದ ಕಾರ್ಯಾಚರಣೆಯಲಿ ಭಾಗವಹಿಸಿದ್ದ ನಗರ ಠಾಣಾ ಪೊಲೀಸರ ಕರ್ತವ್ಯವನ್ನು ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.

Leave A Reply

Your email address will not be published.

error: Content is protected !!