ಅಪಘಾತ ; ಶಾಲಾ ಪ್ರವಾಸಕ್ಕೆ ಬಂದಿದ್ದ 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯ !

0 19

ಅಜ್ಜಂಪುರ : ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ಕಾರು ಹಾಗೂ ಕ್ರೂಸರ್ ವಾಹನ ನಡುವೆ ಡಿಕ್ಕಿಯಾದ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಅಫಜಲಪುರದಿಂದ ಶಾಲಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಪ್ರವಾಸ ಮುಗಿಸಿ ಅಫಜಲಪುರಕ್ಕೆ ತೆರಳುವಾಗ ಈ ಅಪಘಾತವಾಗಿದ್ದು, ಶಾಲಾ ಪ್ರವಾಸಕ್ಕೆ ಬಂದಿದ್ದ 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಕೂಡಲೇ ಅಜ್ಜಂಪುರ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಶಿಕ್ಷಕರೊಂದಿಗೆ ಶೈಕ್ಷಣಿಕ ಪ್ರವಾಸ ಬಂದಿದ್ದ ಈ ವಿದ್ಯಾರ್ಥಿಗಳು ಪ್ರವಾಸ ಮುಗಿಸಿ ಊರಿಗೆ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ತಡರಾತ್ರಿ ವಿದ್ಯಾರ್ಥಿಗಳು ಸಂಚರಿಸುತ್ತಿದ್ದ ಕ್ರೂಸರ್ ವಾಹನ ಮತ್ತು ಕಾರು ನಡುವೆ ಢಿಕ್ಕಿ ಉಂಟಾಗಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ಉರುಳಿಬಿದ್ದಿದೆ.

ಇನ್ನು ಈ ಘಟನೆ ತಡರಾತ್ರಿ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Leave A Reply

Your email address will not be published.

error: Content is protected !!