Chikkamagaluru | ಕರ್ನಾಟಕ ಬಂದ್‌ಗೆ ವ್ಯಾಪಕ ಬೆಂಬಲ

ಚಿಕ್ಕಮಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ರಾಜ್ಯ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಬೆಂಬಲ ವ್ಯಕ್ತವಾಗಿದ್ದು, ಬೆಳಿಗ್ಗೆ ಕನ್ನಡಪರ ಸಂಘಟನೆಗಳು ರಸ್ತೆಗೆಳಿದು ಪ್ರತಿಭಟನೆ ನಡೆಸಿದರು.

ನಗರದ ಕೆಎಸ್‌ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ಪ್ರತಿಕೃತಿ ದಹಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದರು. ಬೆಳಿಗ್ಗೆ ಆಟೋ ಸಂಚಾರ ಸೇರಿದಂತೆ ಖಾಸಗಿ ಬಸ್, ಟ್ಯಾಕ್ಸಿ ಸಂಚಾರ ಸಂಪೂರ್ಣ ಬಂದ್ ಆಗಿತ್ತು.

ಬಿಜೆಪಿ ಪಕ್ಷದ ಕಾರ್ಯಕರ್ತರು ಬಿಜೆಪಿ ಕಚೇರಿಯಿಂದ ಮೆರವಣಿಗೆ ನಡೆಸಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ರಾಜ್ಯದ ಸಂಸದರ ಭಾವಚಿತ್ರ ಇರುವ ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದೆ ವೇಳೆ ಕೆಲ ಕನ್ನಡ ಪರ ಸಂಘಟನೆಗಳ ಮುಖಂಡರು ಖಾಲಿ ಕೊಡಗಳನ್ನು ಪ್ರದರ್ಶಿಸಿದರು.

ಬಂದ್ ಹಿನ್ನೆಲೆ ನಗರದ ಅಂಗಡಿ ಮುಂಗಟ್ಟು ಹೋಟೆಲ್ ಬಸ್ ಸಂಚಾರ ಸೇರಿದಂತೆ ಅಗತ್ಯ ವಸ್ತುಗಳು ವ್ಯಾಪಾರ ವಹಿವಾಟು ಸ್ತಬ್ಧಗೊಂಡಿದೆ.

ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಯಾವುದೇ ಕಾರಣಕ್ಕೂ ಹರಿಸಬಾರದು ರಾಜ್ಯದಲ್ಲಿ ಬರದ ಛಾಯೆ ಎದುರಾಗಿದ್ದು ಇಲ್ಲಿನ ರೈತರ ವ್ಯವಸಾಯಕ್ಕೆ ಮತ್ತು ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದ್ದು ಯಾವುದೇ ಕಾರಣಕ್ಕೂ ನೀರನ್ನು ಹರಿಸಬಾರದು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago