Chikkamagaluru | ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ

0 354

ಚಿಕ್ಕಮಗಳೂರು : ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 15-ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26 ರಂದು ಮತದಾನ ನಡೆಯಲಿದ್ದು, ಮತದಾನದಂದು ಸಾರ್ವಜನಿಕ ಶಾಂತಿ ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಏಪ್ರಿಲ್ 24 ರ ಸಂಜೆ 5.00 ಗಂಟೆಯಿಂದ ಏಪ್ರಿಲ್ 26 ರ ಮಧ್ಯರಾತ್ರಿ 12:00 ಗಂಟೆಯವರೆಗೆ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಆದೇಶ ಹೊರಡಿಸಿದ್ದಾರೆ.

ಎಲ್ಲಾ ನಮೂನೆಯ ಮದ್ಯದಂಗಡಿಗಳನ್ನು (ಸಿಎಲ್ 2,4,6ಎ, 7,9,11,14 ಇತ್ಯಾದಿ ಎಲ್ಲಾ ತರಹದ) ಮುಚ್ಚುವಂತೆಯೂ ಹಾಗೂ ಮದ್ಯ, ಬಿಯರ್, ಮದ್ಯಸಾರ ಇತ್ಯಾದಿ ಅಬಕಾರಿ ಪದಾರ್ಥಗಳ ಸಾಗಾಣಿಕೆ, ಶೇಖರಣೆ, ತಯಾರಿಕೆ, ಸರಬರಾಜು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!