Chikkamagaluru | ಜಿಲ್ಲೆ ಪ್ರವೇಶಕ್ಕೆ ಪ್ರಮೋದ್ ಮುತಾಲಿಕ್‌ಗೆ ನಿರ್ಬಂಧ

0 234

ಚಿಕ್ಕಮಗಳೂರು: ದತ್ತಜಯಂತಿ ಹಿನ್ನೆಲೆಯಲ್ಲಿ ಶ್ರೀಗುರುದತ್ತಾತ್ರೇಯ ಬಾಬಾಬುಡನ್ ದರ್ಗಾಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ, ಪ್ರಚೋದನಕಾರಿ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ (Social media) ಹರಿಬಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಹಾಗೂ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ (Pramod Muthalik) ಮುತಾಲಿಕ್ ಅವರಿಗೆ ಡಿ.23ರಿಂದ ಜ.5ರ ವರೆಗೆ ಜಿಲ್ಲಾ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಗಂಗಾಧರ ಮಹಾಬಲರಾವ್ ಕುಲಕರ್ಣಿ ಅವರು ಇತ್ತೀಚೆಗೆ ಬಾಬಾಬುಡನ್ ದರ್ಗಾಕ್ಕೆ ಸಂಬಂಧಿಸಿದಂತೆ ತಮ್ಮ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಈ ವಿಡಿಯೋದಲ್ಲಿ ಬಾಬಾ ಬುಡನ್‌ಗಿರಿ ದರ್ಗಾ ಇರುವುದು ದತ್ತಪೀಠದಲ್ಲಿ ಅಲ್ಲ, ಅದು ಚಿಕ್ಕಮಗಳೂರು ತಾಲೂಕಿನ ಜಾಗರ ಹೋಬಳಿ ನಾಗೇನಹಳ್ಳಿ ಗ್ರಾಮದ ಸ.ನಂ.57ರಲ್ಲಿದೆ. ಇಲ್ಲಿ ಬಾಬಾಬುಡನ್ ಎಂಬ ದತ್ತತ್ರೇಯ ಸ್ವಾಮಿಯ ಭಕ್ತ ಹಿಂದೆ ಇದ್ದ. ಮುಸ್ಲಿಂ ಸಮುದಾಯದ ಜನರು ದತ್ತಪೀಠದಲ್ಲಿ ಉರೂಸ್ ಮಾಡುತ್ತಾರೆ. ನಾವು ನಾಗೇನಹಳ್ಳಿ ಯಲ್ಲಿ ದತ್ತಜಯಂತಿ ಮಾಡಿದರೇ ತಪ್ಪೇನು?, ಡಿ.26ಕ್ಕೆ ನಾಗೇನಹಳ್ಳಿಯಲ್ಲಿ ದತ್ತಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುವುದು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕೆಂದು ಈ ವಿಡಿಯೋದಲ್ಲಿ ಹೇಳಿಕೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದ್ದು, ದತ್ತಜಯಂತಿ ಸಂದರ್ಭ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಅವರು ಪ್ರಚೋದನಕಾರಿ ಹೇಳಿಕೆ ನೀಡಿರುವುದರಿಂದ ಜಿಲ್ಲೆಯ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಎರಡು ಸಮುದಾಯದವರ ಶಾಂತಿಭಂಗ ಉಂಟಾಗುವ ಸಾಧ್ಯತೆಯನ್ನು ವರದಿಯಲ್ಲಿ ಉಲ್ಲೇಖಿಸಿದ್ದರು.

ಈ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಸಾರ್ವಜನಿಕರ ಶಾಂತಿಭಂಗ ಆಗುವುದನ್ನು ತಡೆ ಯುವ ಉದ್ದೇಶದಿಂದ ಗಂಗಾಧರ ಕುಲಕರ್ಣಿ ಹಾಗೂ ಪ್ರಮೋದ್ ಮುತಾಲಿಕ್ ಅವರಿಗೆ ಡಿ.23ರಿಂದ ಜ.5ರ ವರೆಗೆ ಚಿಕ್ಕಮಗಳೂರು ಜಿಲ್ಲಾ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.

Leave A Reply

Your email address will not be published.

error: Content is protected !!