Chikkamagaluru | PU Result | ಸಂತ ಜೋಸೆಫರ ಬಾಲಕಿಯರ ಕಾಲೇಜ್‌ಗೆ ಶೇ.97 ಫಲಿತಾಂಶ, ಮಾನಸ.ಪಿ ಜಿಲ್ಲೆಗೆ ಪ್ರಥಮ

0 642

ಚಿಕ್ಕಮಗಳೂರು : ಸಂತ ಜೋಸೆಫರ ಬಾಲಕಿಯರ ಪದವಿ ಪೂರ್ವ ಕಾಲೇಜಿನ 2023-24ರ ದ್ವಿತೀಯ ಪಿ.ಯುನಲ್ಲಿ ಶೇಕಡ 97 ಫಲಿತಾಂಶ ಬಂದಿದ್ದು ವಾಣಿಜ್ಯ ವಿಭಾಗದಲ್ಲಿ ಮಾನಸ ಪಿ 589 ಅಂಕಗಳನ್ನು ಪಡೆಯುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.

2023-24 ನೇ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಸಂತ ಜೋಸೆಫರ ಬಾಲಕೀಯರ ಪದವಿ ಪೂರ್ವ ಕಾಲೇಜಿನ ಒಟ್ಟು 122 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದು, ಒಟ್ಟು 47 ವಿದ್ಯಾರ್ಥಿನಿಯರು ಅತ್ಯುತ್ತಮ ಶ್ರೇಣಿಯಲ್ಲಿ , 66 ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಕಾಲೇಜಿನ ಫಲಿತಾಂಶ ಶೇಕಡ 97% ಆಗಿರುತ್ತದೆ.

ವಾಣಿಜ್ಯ ವಿಭಾಗದಲ್ಲಿ ಮಾನಸ ಪಿ 589 ಅಂಕಗಳನ್ನು ಪಡೆದು ಜಿಲ್ಲೆಗೆ ಹಾಗೂ ತಾಲ್ಲೂಕಿಗೆ ಪ್ರಥಮರಾಗಿರುತ್ತಾರೆ ಹಾಗೂ ಲೆಕ್ಕಶಾಸ್ತ್ರ, ಗಣಕ ವಿಜ್ಞಾನದಲ್ಲಿ 100ಕ್ಕೆ 100 ಅಂಕಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಜೋಹರ ಫಾತಿಮಾ 570 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮರಾಗಿರುತ್ತಾರೆ ಹಾಗೂ ಗಣಿತಶಾಸ್ತ್ರದಲ್ಲಿ 100ಕ್ಕೆ 99 ಅಂಕಗಳನ್ನು ಪಡೆದಿರುತ್ತಾರೆ.
ಎಲ್ಲಾ ವಿದ್ಯಾರ್ಥಿನಿಯರಿಗೆ ಕಾಲೇಜಿನ ಆಡಳಿತ ಮಂಡಳಿಯು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Leave A Reply

Your email address will not be published.

error: Content is protected !!