ಕರ್ತವ್ಯದಲ್ಲಿದ್ದ KSRTC ಬಸ್ ಚಾಲಕ ಹೃದಯಾಘಾತದಿಂದ ಸಾವು !

0 528

ಮೂಡಿಗೆರೆ : ಕರ್ತವ್ಯದಲಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ (KSRTC Bus) ಚಾಲಕ ಹೃದಯಘಾತದಿಂದ (Heart Attack) ಸಾವನ್ನಪ್ಪಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

ಮೂಡಿಗೆರೆಯಿಂದ ಗುತ್ತಿಹಳ್ಳಿ, ಹೆಸಗೋಡು ಗ್ರಾಮಕ್ಕೆ ತೆರಳುತ್ತಿದ್ದ ಬಸ್ ಚಾಲಕ ರವಿ ಲಮಾಣಿ (46) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚಾಲನೆ ಮಾಡುತ್ತಿದ್ದ ವೇಳೆಯೇ ಎದೆ ನೋವು ಕಾಣಿಸಿಕೊಂಡಿದ್ದು, ಆ ಸಂದರ್ಭದಲ್ಲಿ ಬಸ್ ಹೆಸಗೋಡು ಗ್ರಾಮದಲ್ಲಿ ನಿಂತಿದ್ದರಿಂದ ಭಾರೀ ಅನಾಹುತ ತಪ್ಪಿದೆ.

ಎದೆನೋವು ಎಂದು ಬಸ್ಸಿನೊಳಗೆ ಬಂದು ಬಿದ್ದಿದ್ದು, ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತ ರವಿ ಲಮಾಣಿ ಕೊಪ್ಪಳ ಮೂಲದವರು ಎಂದು ತಿಳಿದುಬಂದಿದೆ.

ಹಲವು ವರ್ಷಗಳಿಂದ ಮೂಡಿಗೆರೆ ಡಿಪೋದಲ್ಲಿ ಚಾಲಕರಾಗಿದ್ದರು. ಜನರಿಗೆ ಉತ್ತಮ ಸೇವೆ ನೀಡುತ್ತಿದ್ದರು. ಮೃತರು ತಂದೆ, ತಾಯಿ, ಪತ್ನಿ, ಮೂವರು ಪುತ್ರರನ್ನು ಅಗಲಿದ್ದಾರೆ. ಮೂಡಿಗೆರೆ ಎಂ.ಜಿ.ಎಂ.ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

Leave A Reply

Your email address will not be published.

error: Content is protected !!