ಚಿಕ್ಕಮಗಳೂರು : ಕಾಡ್ಗಿಚ್ಚು ಉಂಟಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳ ಬೈಕ್ ಭಸ್ಮವಾಗಿರುವ ಘಟನೆ ತಾಲೂಕಿನ ಸಿಂದಿಗೆರೆ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಕಾಡ್ಗಿಚ್ಚು ಉಂಟಾಗಿ ಗಾಳಿಯಲ್ಲಿ ಬಂದ ಬೆಂಕಿಯ ಕಿಡಿಯಿಂದ ಮೂರು ಬೈಕ್‌ಗಳು ಬೆಂಕಿಗಾಹುತಿಯಾಗಿದ್ದು, ಏಕಾಏಕಿ ಧಗ-ಧಗ ಹೊತ್ತಿ ಉರಿದು ಭಸ್ಮವಾಗಿದೆ.
ಅರಣ್ಯ ಇಲಾಖೆ ಸಿಬ್ಬಂದಿಗಳು ರಸ್ತೆ ಬದಿಯಲ್ಲಿ ಬೈಕ್‌ಗಳನ್ನು ನಿಲ್ಲಿಸಿದ್ದರು. ಗಾಳಿಯ ರಭಸಕ್ಕೆ ರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್ ಮೇಲೆ ಬೆಂಕಿಯ ಕಿಡಿ ತಗುಲಿದ್ದು, ಪರಿಣಾಮ ಮೂರು ಬೈಕ್‌ಗಳು ಸುಟ್ಟು ಕರಕಲಾಗಿವೆ.
ಅರಣ್ಯಕ್ಕೆ ಬಿದ್ದ ಬೆಂಕಿಯನ್ನ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹೋಗಿದ್ದರು. ಆದರೆ ಅವರು ಬರೋವಷ್ಟರಲ್ಲಿ ಬೈಕ್‌ಗಳು ಸುಟ್ಟು ಕರಕಲಾಗಿದೆ.