ಕಿಡ್ನಾಪರ್‌ಗೆ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆದ ಪೋರ ! ಸಿಸಿಟಿವಿಯಲ್ಲಿ ದೃಶ್ಯ ಸೆರೆ

0 245

ಚಿಕ್ಕಮಗಳೂರು : ಇದ್ದಕ್ಕಿದ್ದಂತೆ ಬಂದು ಎತ್ತಿಕೊಂಡು ಓಡಿದ ಕಿಡ್ನಾಪರ್‌ಗೆ ಅಷ್ಟೇ ಚಾಣಾಕ್ಷತನದಿಂದ ಒಬ್ಬ ಪೋರ ಚಳ್ಳೆಹಣ್ಣು ತಿನ್ನಿಸಿ ಪಾರಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ಚಿಕ್ಕಮಗಳೂರು ನಗರದ ಎಂಜಿ ರಸ್ತೆಯಲ್ಲಿ ಭಾನುವಾರ ಸಂಜೆ 6.38ರ ವೇಳೆಗೆ ಬಾಲಕನ ಅಪಹರಣಕ್ಕೆ ಈ ಯತ್ನ ನಡೆದಿದೆ. ಫುಟ್‌ಪಾತ್‌ನಲ್ಲಿ ಗೆಳೆಯರ ಜತೆಗೆ ಆಟವಾಡುತ್ತಿದ್ದ ಮಗುವನ್ನು ಅಪಹರಿಸಲು ಒಬ್ಬ ವ್ಯಕ್ತಿ ಯತ್ನಿಸಿದ್ದಾನೆ. ಅಪಹರಿಸಿ ಹೆಗಲ ಮೇಲೆ ಎತ್ತಿಕೊಂಡು ವ್ಯಕ್ತಿ ವೇಗವಾಗಿ ಮುನ್ನಡೆದಿದ್ದು, ಬಾಲಕ ನುಸುಳಿಕೊಂಡು ಹೆಗಲಿನಿಂದ ಕೆಳಗೆ ಹಾರಿ ಚಾಣಾಕ್ಷತೆಯಿಂದ ಎಸ್ಕೇಪ್‌ ಆಗಿದ್ದಾನೆ.‌

ಸಾಹಸ ಮೆರೆದು ಧೈರ್ಯ ಪ್ರದರ್ಶಿಸಿದ ಬಾಲಕ ಯುಕೆಜಿ ವಿದ್ಯಾರ್ಥಿಯಾಗಿದ್ದು, ಬಾಲಕನ ಸಮಯಸ್ಫೂರ್ತಿಗೆ ಜನರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಸಿನಿಮೀಯ ರೀತಿಯಲ್ಲಿ ನಡೆದಿರುವ ಈ ಘಟನೆ ಜನನಿಬಿಡ ಪ್ರದೇಶದಲ್ಲೇ ನಡೆದಿದ್ದರೂ ಫಕ್ಕನೆ ಯಾರ ಗಮನಕ್ಕೂ ಬಂದಿಲ್ಲ. ಅಪಹರಣಕ್ಕೆ ಯತ್ನಿಸಿದ ವ್ಯಕ್ತಿಯ ಚಹರೆ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ.

Leave A Reply

Your email address will not be published.

error: Content is protected !!