ಕೊಪ್ಪ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

0 6

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಅದರಲ್ಲಿಯೂ ಕೊಪ್ಪ ತಾಲೂಕಿನಲ್ಲಿ ಕುಂಭ ದ್ರೋಣ ಮಳೆ ಸುರಿಯುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸೋಮವಾರ ಕೊಪ್ಪ ತಾಲೂಕಿನ‌ ಶಾಲಾ‌-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಒಂದು ದಿನ ಕೊಪ್ಪ ತಾಲೂಕಿನ ಶಾಲಾ‌-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

ಕೊಪ್ಪ ತಾಲೂಕು ಸೇರಿ ಚಿಕ್ಕಮಗಳೂರು ಜಿಲ್ಲಾದ್ಯಂತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಉಳಿದ ಮಲೆನಾಡು ತಾಲೂಕುಗಳಿಗೂ ರಜೆ ಘೋಷಿಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ, ಚಿಕ್ಕಮಗಳೂರು ತಾಲೂಕುಗಳಿಗೆ ರಜೆ ಘೋಷಿಸುವ ಕುರಿತು ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದಾರೆ.

ಇತ್ತ ಶಿವಮೊಗ್ಗ ಜಿಲ್ಲೆಯಲ್ಲಿಯೂ ಭಾರಿ ಪ್ರಮಾಣದ ಮಳೆಯಾಗುತ್ತಿದೆ‌. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ.

Leave A Reply

Your email address will not be published.

error: Content is protected !!