ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್’ಗೆ ಕಾರು ಡಿಕ್ಕಿ ; ಇಬ್ಬರು ಸ್ಥಳದಲ್ಲೇ ಸಾವು !
ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಅವಘಡ ನಗರದ ಹೊರವಲಯದ ಕಣಿವೆ ಕ್ರಾಸ್ ಬಳಿ ಬುಧವಾರ ನಡೆದಿದೆ.
ಢಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ನಿರಂಜನ್ (42) ಚೆನ್ನಮ್ಮ (67) ಸ್ಥಳದಲ್ಲೇ ಸಾವನ್ನಪ್ಪಿದ್ದು, ರತ್ನಮ್ಮ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರು ಚಿಕ್ಕಮಗಳೂರಿನಿಂದ ಕಡೂರಿನ ಕಡೆಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಮೃತ ದುರ್ದೈವಿಗಳು ಚಿಕ್ಕಮಗಳೂರಿನ ವಿಜಯಪುರ ಬಡಾವಣೆ ನಿವಾಸಿಗಳಾಗಿದ್ದು ನಿರಂಜನ್ ಖಾಸಗಿ ಆಸ್ಪತ್ರೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು.

ಗಂಭೀರವಾಗಿ ಗಾಯಗೊಂಡ ರತ್ನಮ್ಮ ಅವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.