ಜೂ.7 ರಂದು ಶ್ರೀ ರಂಭಾಪುರಿ ಜಗದ್ಗುರುಗಳ ಸಾನ್ನಿಧ್ಯದಲ್ಲಿ
ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ

0 0


ಚಿಕ್ಕಮಗಳೂರು : ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ದಿವ್ಯ ಸಾನ್ನಿಧ್ಯದಲ್ಲಿ ಜೂನ್ 7 ರಂದು ನಗರದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಮತ್ತು ಭಕ್ತಿ ಭಂಡಾರಿ ಶ್ರೀ ಬಸವೇಶ್ವರರ ಜಯಂತಿ ಮಹೋತ್ಸವ ಆಯೋಜಿಸಲಾಗಿದೆ.


ಬುಧವಾರ ಪೂರ್ವಾಹ್ನ 11:30ಕ್ಕೆ ನಗರದ ಶ್ರೀ ಜಗದ್ಗುರು ರೇಣುಕಾಚಾರ್ಯ ಸಮುದಾಯ ಭವನದಲ್ಲಿ ನಡೆಯುವ ಧಾರ್ಮಿಕ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಆಶೀರ್ವಚನ ನೀಡುವರು.


ಶಾಸಕ ಎಚ್.ಡಿ.ತಮ್ಮಯ್ಯ ಸಮಾರಂಭ ಉದ್ಘಾಟಿಸಲಿದ್ದು, ಟ್ರಸ್ಟ್ ಉಪಾಧ್ಯಕ್ಷ ಎ.ಬಿ.ಸುದರ್ಶನ್ ಅಧ್ಯಕ್ಷತೆ ವಹಿಸುವರು. ಹುಲಿಕೆರೆ ದೊಡ್ಡಮಠದ ವಿರೂಪಾಕ್ಷಲಿಂಗ ಶಿವಾಚಾರ್ಯರು ಮತ್ತು ಕಿರಿಯ ಶ್ರೀಗಳಾದ ಬಸವರಾಜ ಪಂಡಿತಾರಾಧ್ಯ ಶಿವಾಚಾರ್ಯರು, ಶಂಕರದೇವರಮಠದ ಚಂದ್ರಶೇಖರ ಶಿವಾಚಾರ್ಯರು ಮತ್ತು ಬೇರುಗಂಡಿ ಬೃಹನ್ಮಠದ ರೇಣುಕ ಮಹಾಂತ ಶಿವಾಚಾರ್ಯರು ಪಾಲ್ಗೊಳ್ಳುವರು.


ಲೋಕ ಕಲ್ಯಾಣಾರ್ಥವಾಗಿ ಬೆಳಿಗ್ಗೆ 8 ಗಂಟೆಯಿಂದ ಪೂಜ್ಯ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜೆ, ಅಷ್ಟೋತ್ತರ ಮಹಾಮಂಗಲ, ಪಾದಪೂಜೆ ಏರ್ಪಡಿಸಲಾಗಿದೆ. ಅಂದೇ ಪ್ರಾತಃಕಾಲ 7 ಗಂಟೆಗೆ ಶಂಕರದೇವರ ಮಠಾಧ್ಯಕ್ಷರ ನೇತೃತ್ವದಲ್ಲಿ ವಟುಗಳಿಗೆ ಶಿವದೀಕ್ಷಾ ಸಂಸ್ಕಾರ ನೀಡಲಾಗುವುದೆಂದು ಟ್ರಸ್ಟ್ ಕಾರ‍್ಯದರ್ಶಿ ಸಿ.ವಿ.ಮಲ್ಲಿಕಾರ್ಜುನ ಮತ್ತು ಖಜಾಂಚಿ ಯು.ಎಂ.ಬಸವರಾಜು ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!