ಬೆಳೆ ನಾಶ ನೇಣಿಗೆ ಕೊರಳೊಡ್ಡಿದ ರೈತ

0 510

ಕಡೂರು : ಬರದಿಂದ ಬೆಳೆ ನಾಶವಾಗಿದ್ದು, ಸಾಲ ಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಾಲೂಕಿನ ಜೋಡಿ ಲಿಂಗದಹಳ್ಳಿ ಗ್ರಾಮದ ರೈತ ಕೃಷ್ಣನಾಯ್ಕ್ (55) ಸಾಲ ಭಾದೆ ತಾಳಲಾರದೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೃಷ್ಣನಾಯ್ಕ್ ಅವರು 3 ಲಕ್ಷ ರೂ. ಸಾಲ ಮಾಡಿ ರಾಗಿ, ಜೋಳ ಬಿತ್ತನೆ ಮಾಡಿದ್ದರು. ಮಳೆ‌ ಇಲ್ಲದೆ ಬೆಳೆ‌ ನಾಶವಾದ ಹಿನ್ನೆಲೆಯಲ್ಲಿ ಮನನೊಂದು ರೈತ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಳೆದ 40 ದಿನಗಳಲ್ಲಿ ಕಡೂರು ತಾಲೂಕಿನಲ್ಲಿ ಐದು ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.

error: Content is protected !!