ಚಿಕ್ಕಮಗಳೂರು: ಬೊಲೆರೊ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಉದ್ದೇಬೋರನಹಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಉದ್ದೇಬೋರನಹಳ್ಳಿ ನಿವಾಸಿ ನೇಮರಾಜ (55) ಎಂದು ಗುರುತಿಸಲಾಗಿದೆ. ಅತೀ ವೇಗದಲ್ಲಿ ಬಂದ ಬೊಲೆರೊ ಪಿಕಪ್ ವಾಹನ ನೇಮರಾಜ ಅವರಿಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಸ್ಥಳದಲ್ಲೇ ನೇಮರಾಜ ಸಾವನ್ನಪ್ಪಿದ್ದು ವಾಹನದಲ್ಲಿದ್ದ ಡ್ರೈವರ್ ಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.