ಮತದಾನಕ್ಕಾಗಿ ಬೇಕಾಗುವ ದಾಖಲೆಗಳಿವು

ಚಿಕ್ಕಮಗಳೂರು: ನಾಳೆ ನಡೆಯುವ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಮತದಾನ ಬೆಳಿಗ್ಗೆ 07.00 ಗಂಟೆಯಿಂದ ಸಂಜೆ 06.00 ಗಂಟೆ ವರೆಗೆ ನಡೆಯಲ್ಲಿದ್ದು, ಮತದಾರರು ಮತದಾನ ಕೇಂದ್ರದಲ್ಲಿ ಈ ಕೆಳಗಿನ ದಾಖಲೆಗಳನ್ನು ಗುರುತಿನ ಚೀಟಿಯಾಗಿ ಬಳಸಬಹುದಾಗಿದ್ದು, ಇವುಗಳಲ್ಲಿ ಒಂದನ್ನು ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ.


ಭಾವಚಿತ್ರವಿರುವ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಎಂ.ಎನ್.ಆರ್. ಇಜಿಎ ಜಾಬ್ ಕಾರ್ಡ್, ಬ್ಯಾಂಕ್/ಅಂಚೆ ಕಛೇರಿ ನೀಡಿರುವ ಭಾವಚಿತ್ರವಿರುವ ಪಾಸ್ ಬುಕ್, ಕಾರ್ಮಿಕ ಸಚಿವಾಲಯದಿಂದ ನೀಡಿರುವ ಆರೋಗ್ಯ ವಿಮೆ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್, ಎನ್ ಪಿ ಆರ್ ನ ಅಡಿಯಲ್ಲಿ ಆರ್ ಜಿ ಐ ನೀಡಿರುವ ಸ್ಮಾರ್ಟ್ ಕಾರ್ಡ್, ಭಾರತೀಯ ಪಾಸ್ ಪೋರ್ಟ್, ಭಾವಚಿತ್ರವಿರುವ ಪಿಂಚಣಿ ದಾಖಲೆ, ಸೇವಾ ಗುರುತಿನ ಚೀಟಿ (ಕೇಂದ್ರ/ರಾಜ್ಯ ಸರ್ಕಾರ / ಪಿಎಸ್‌ಯುಗಳ ಗುರುತಿನ ಚೀಟಿ), ಎಂಪಿ/ಎಂ ಎಲ್ ಎ/ ಎಂ ಎಸ್ ಸಿ ಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿ ನೀಡಿ ಮತದಾನ ಮಾಡಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,802FollowersFollow
0SubscribersSubscribe
- Advertisement -spot_img

Latest Articles

error: Content is protected !!