ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

0 277

ಕಡೂರು : ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಿರೇನಲ್ಲೂರು ಹೋಬಳಿಯ ಕೇದಿಗೆರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮಂಜುನಾಥ (38) ಮೃತ ದುರ್ಧೈವಿ. ಮಂಜುನಾಥ ತನ್ನ ತಂದೆಗೆ ಸೇರಿದ 2 ಎಕರೆ ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡಿದ್ದ, ಇತ್ತೀಚೆಗೆ ಸೂರ್ಯಕಾಂತಿ, ನೆಲಗಡಲೆ, ಈರುಳ್ಳಿ ಬೆಳೆಯಲು ವಿವಿಧ ಬ್ಯಾಂಕ್ ಹಾಗೂ ಫೈನಾನ್ಸ್ ಮತ್ತಿತರ ಕಡೆಗಳಲ್ಲಿ ಸುಮಾರು 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಬೆಳೆ ಸರಿಯಾಗಿ ಬರದ ಕಾರಣ ಮನನೊಂದು ಅವರ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತನ ಪತ್ನಿ ರೇಣುಕಮ್ಮ ನೀಡಿದ ದೂರಿನ ಆಧಾರದಲ್ಲಿ ಯಗಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೀರೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಶವಪರೀಕ್ಷೆ ನಡೆಸಿ ವರದಿ ನೀಡಿದ್ದಾರೆ.

Leave A Reply

Your email address will not be published.

error: Content is protected !!