ಸೆ.29 ರಂದು ಶ್ರೀ ಜಗದ್ಗುರು ರಂಭಾಪುರಿ ಮಹಾಪೀಠದಲ್ಲಿ ಶ್ರೀ ವೀರಭದ್ರಸ್ವಾಮಿ ಜಯಂತ್ಯುತ್ಸವ

0 235

ಎನ್.ಆರ್.ಪುರ: ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದಲ್ಲಿ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಸೆ.29 ಶುಕ್ರವಾರದಂದು ಬೆಳಿಗ್ಗೆ ಶ್ರೀ ವೀರಭದ್ರಸ್ವಾಮಿ ಜಯಂತ್ಯುತ್ಸವ ಸಮಾರಂಭ ಏರ್ಪಡಿಸಲಾಗಿದೆ.


ಅಖಿಲ ಕರ್ನಾಟಕ ವೀರಶೈವ ಅರ್ಚಕ ಪುರೋಹಿತರ ನಿಸ್ವಾರ್ಥ ಸೇವಾ ಸಂಘ ಇವರು ಆಯೋಜಿಸಿದ ಕಾರ್ಯಕ್ರಮದಲ್ಲಿ ಮಠಾಧೀಶರು ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಭಾಗವಹಿಸುವರು.


ಶ್ರೀ ವೀರಭದ್ರಸ್ವಾಮಿ ಜಯಂತ್ಯುತ್ಸವದ ನಿಮಿತ್ಯ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮೊದಲ್ಗೊಂಡು ಶ್ರೀ ಪೀಠದ ಎಲ್ಲ ದೈವಗಳಿಗೆ ಮಹಾರುದ್ರಾಭಿಷೇಕ ಅಷ್ಟೋತ್ತರ ಮಹಾಮಂಗಲ ವಿಶೇಷ ಪೂಜೆ ನಡೆಯುವುದು.

Leave A Reply

Your email address will not be published.

error: Content is protected !!