Categories: Chikkamagaluru

ಅಂಬೇಡ್ಕರ್ ಭವನ ನಿರ್ಮಿಸಲು ಜಿಲ್ಲಾಡಳಿತಕ್ಕೆ ದಸಂಸ ಒತ್ತಾಯ

ಚಿಕ್ಕಮಗಳೂರು : ನೂರಾರು ಸಂಖ್ಯೆಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂ ಗಡದ ಕುಟುಂಬಗಳಿಗೆ ಗ್ರಾಮದಲ್ಲಿ ಡಾ|| ಬಿ.ಆರ್.ಅಂಬೇಡ್ಕರ್ ಭವನ ನಿರ್ಮಿಸಿ ಸಭೆ ಸಮಾರಂಭ ನಡೆಸಲು ಅನುವು ಮಾಡಿಕೊಡಬೇಕು ಎಂದು ದಸಂಸ ಮುಖಂಡರುಗಳು ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವ ರಿಗೆ ಶುಕ್ರವಾರ ಮನವಿ ಸಲ್ಲಿಸಿದರು.


ಈ ಕುರಿತು ದಸಂಸ ಜಿಲ್ಲಾ ಸಂಚಾಲಕ ಎಲ್.ಎಸ್.ಶ್ರೀಕಾಂತ್ ಮಾತನಾಡಿ, ನ.ರಾ.ಪುರ ತಾಲ್ಲೂಕಿನ ಕಾನೂರು ಹಾಗೂ ಹರವರಿ ಗ್ರಾಮಗಳಲ್ಲಿ ಕಳೆದ ಹಲವಾರು ಕಾಲದಿಂದ 500ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿರುವ ಹಿನ್ನೆಲೆಯಲ್ಲಿ ಸಣ್ಣಪುಟ್ಟ ಕಾರ್ಯಕ್ರಮ ಅಥವಾ ಕುಟುಂಬದ ಸಮಾರಂಭಕ್ಕೆ ಭವನವಿಲ್ಲದೇ ಬಹಳಷ್ಟು ಸಮಸ್ಯೆಯಾಗಿದೆ ಎಂದು ಹೇಳಿದರು.


ಬಾಳೆಹೊನ್ನೂರು ಹೋಬಳಿ ಕಾನೂರು ಗ್ರಾಮಸ್ಥರು ಸೌಹಾರ್ದತೆಯಿಂದ ಜೀವನ ನಡೆಸುತ್ತಿದ್ದು ಈ ವ್ಯಾಪ್ತಿಯ ಸೊಪ್ಪಿನ ಬೆಟ್ಟದ ಸರ್ವೆ ನಂ.97 ರಲ್ಲಿ ವಿಸ್ತಾರವಾಗಿ ಜಾಗವಿದ್ದು ಈ ಪೈಕಿ 10 ಗುಂಟೆ ಜಮೀನಿನ ಜಾಗವನ್ನು ಗುರುತಿಸಿ ಸರ್ವೆ ನಡೆಸಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಂಜೂರು ಮಾಡಿಕೊಡಬೇಕು ಎಂದರು.


ಕಾನೂರು ಗ್ರಾ.ಪಂ. ವ್ಯಾಪ್ತಿಯ ಹರವರಿ ಗ್ರಾಮಸ್ಥರಿಗೆ ಸರ್ಕಾರಿ ಅಥವಾ ಇತರೆ ಕಾರ್ಯಕ್ರಮಗಳನ್ನು ಏರ್ಪಡಿಸಲು ಭವನಗಳಿಲ್ಲ. ಹೀಗಾಗಿ ಈ ವ್ಯಾಪ್ತಿಯ ದೊಡ್ಡಹಡ್ಲು ಸರ್ವೆ ನಂ.63 ರಲ್ಲಿ ವಿಶಾಲವಾದ ಸರ್ಕಾರಿ ಜಾಗವಿದ್ದು ಈ ಪೈಕಿ 10 ಗುಂಟೆ ಜಾಗವನ್ನು ಗುರುತಿಸಿ ಸರ್ವೆ ನಡೆಸುವ ಮೂಲಕ ಭವನ ನಿರ್ಮಾಣಕ್ಕೆ ಭೂ ಮಂಜೂರಾತಿಗಾಗಿ ಒತ್ತಾಯಿಸಿದರು.


ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ರಾಮು ಎನ್.ಆರ್.ಪುರ, ಕಾನೂರು ಗ್ರಾಮ ಸಂಚಾಲಕ ಸುಜಿತ್, ಕಾರ್ಯದರ್ಶಿ ಚಂದ್ರಶೇಖರ್, ಮುಖಂಡರುಗಳಾದ ವಿನಯ್, ಸುರೇಶ್, ಹರೀಶ್, ಶಿವಕುಮಾರ್, ಸಂತೋಷ್, ತಿಮ್ಮಯ್ಯ ಮತ್ತಿತರರು ಹಾಜರಿದ್ದರು.

Malnad Times

Recent Posts

ತನ್ನೊಂದಿಗೆ ಚರ್ಚೆಗೆ ಬರುವಂತೆ ಅಣ್ಣಾಮಲೈಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್ !

ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…

8 hours ago

ಮತದಾನದಲ್ಲೂ ಶಿವಮೊಗ್ಗ ಎತ್ತರಕ್ಕೇರಲಿ ; ಸ್ನೇಹಲ್ ಸುಧಾಕರ್ ಲೋಖಂಡೆ

ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…

8 hours ago

ಹೃದಯಾಘಾತ ; ಮಮತಾ ನಿಧನ

ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…

9 hours ago

ಶ್ರೀಮನ್ಮಹಾರಥೋತ್ಸವ ಜಾತ್ರೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಪನ್ನ

ರಿಪ್ಪನ್‌ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…

9 hours ago

ಬಟಾಣಿಜಡ್ಡು ಗ್ರಾಮದಲ್ಲಿ ಭತ್ತದ ಬೆಳೆ ನಾಶಗೊಳಿಸಿದ ಕಾಡಾನೆಗಳು, ಆತಂಕದಲ್ಲಿ ರೈತರು

ರಿಪ್ಪನ್‌ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…

11 hours ago

ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿದ ಈಚಲುಕೊಪ್ಪ, ಕಾಪೇರಮನೆ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…

14 hours ago