Categories: Chikkamagaluru

ಅಜ್ಜಿಗೆ ರಾಜಕೀಯ ಮರು ಜನ್ಮ ನೀಡಿದ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ

ಚಿಕ್ಕಮಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಕೇಂದ್ರ ನಾಯಕರು ಕರ್ನಾಟಕ ಟೂರ್ ಮಾಡುತ್ತಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಕಾಂಗ್ರೆಸ್​ ನಾಯಕ ರಾಹುಲ್‌ಗಾಂಧಿ ಅವರು ಉತ್ತರ ಕರ್ನಾಟಕ ಭಾಗದಲ್ಲಿ ಪ್ರಚಾರ ನಡೆಸಿದ್ದರು. ರಾಹುಲ್‌ಗಾಂಧಿ ಅವರು ದೆಹಲಿಗೆ ವಾಪಸಾದ ಬೆನ್ನಲ್ಲೇ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕರ್ನಾಟಕಕ್ಕೆ ಬಂದಿದ್ದಾರೆ. ಮಂಗಳವಾರ ಮೈಸೂರು ಜಿಲ್ಲೆಯಲ್ಲಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಿದ್ದರು. ಇಂದು ಮಾಜಿ ಪ್ರಧಾನಿ ದಿವಂತ ಇಂದಿರಾಗಾಂಧಿ ಅವರಿಗೆ ರಾಜಕೀಯ ಪುನರ್ಜನ್ಮ ನೀಡಿದ್ದ ಚಿಕ್ಕಮಗಳೂರಿಗೆ ಭೇಟಿ ನೀಡಲಿದ್ದಾರೆ.

ಒಂದು ಕಾಲದಲ್ಲಿ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಚಿಕ್ಕಮಗಳೂರು 1998 ರಿಂದ ಈಚೆಗೆ ಕಮಲ ಅರಳಿದೆ. ಈಗ ಮತ್ತೆ ಕಾಂಗ್ರೆಸ್ ಬಾವುಟ ಹಾರಿಸಲು ಜಿಲ್ಲೆಗೆ ಪ್ರಿಯಾಂಕಾ ಗಾಂಧಿ ಲಗ್ಗೆ ಇಡುತ್ತಿದ್ದಾರೆ.

ಪ್ರಿಯಾಂಕಾ ಗಾಂಧಿಯವರು ಇಂದು ಪಂಚಪೀಠಗಳಲ್ಲಿ ಒಂದಾದ ರಂಭಾಪುರಿ ಮಠ ಮತ್ತು ಶೃಂಗೇರಿ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಜಿಲ್ಲೆಯ ಎನ್ಆರ್ಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣದಲ್ಲಿ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ ಡಿ ರಾಜೇಗೌಡ ಪರ ಮತ ಪ್ರಚಾರ ಮಾಡಲಿದ್ದಾರೆ. ನಂತರ ಹೆಲಿಕಾಪ್ಟರ್ ನಲ್ಲಿ ಹಿರೇಕೆರೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Malnad Times

Recent Posts

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

1 hour ago

ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನಾ ಸ್ಥಳಕ್ಕೆ ಶಾಸಕದ್ವಯರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…

4 hours ago

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

8 hours ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

21 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

24 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

1 day ago