ಅಮಾಯಕ ವ್ಯಕ್ತಿ ವಿನಾಕಾರಣ 12 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದಾನೆ !

0 50

ಚಿಕ್ಕಮಗಳೂರು: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣದಲ್ಲಿ ಅಮಾಯಕ ವ್ಯಕ್ತಿ ವಿನಾಕಾರಣ 12 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸುವಂತಾಗಲು ಶಾಸಕಾಂಗ ಹಾಗೂ ಕಾರ್ಯಾಂಗ ವ್ಯವಸ್ಥೆಯಲ್ಲಿನ ಲೋಪದೋಷವೇ ಕಾರಣ. ಇದರಿಂದಾಗಿ ಅಮಾಯಕ ವ್ಯಕ್ತಿಯೋರ್ವನ ಜೀವನವೇ ನಾಶವಾಗಿದೆ ಎಂದು ಪ್ರಜಾಪ್ರಭುತ್ವ ಉಳಿಸಿ ಆಂದೋಲನ ವೇದಿಕೆ ಮುಖಂಡರ ನಾಗೇಶ್ ತಿಳಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 12 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾಳ ಅತ್ಯಾಚಾರ, ಹತ್ಯೆ ಕೃತ್ಯ ನಡೆದಿದ್ದು, ಈ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್ ರನ್ನು ಸಿಬಿಐ ನ್ಯಾಯಾಲಯ ನಿರಪರಾಧಿ ಎಂದು ಬಿಡುಗಡೆ ಮಾಡಿದೆ. ಈ ಮೂಲಕ ಓರ್ವ ಅಮಾಯಕ ವ್ಯಕ್ತಿಯನ್ನು ಪ್ರಕರಣದಲ್ಲಿ ಸಿಲುಕಿಸಿ 12 ವರ್ಷಗಳ ಕಾಲ ಜೈಲಿನಲ್ಲಿಟ್ಟು ಆತ ಹಾಗೂ ಆತನ ಕುಟುಂಬದವರ ಬದುಕನ್ನೇ ನಾಶ ಮಾಡಲಾಗಿದೆ.

ಈ ಪ್ರಕರಣದ ತನಿಖಾಧಿಕಾರಿಗಳು ಪ್ರಭಾವಿಗಳ ಲಂಚದ ಆಮಿಷಕ್ಕೆ ಬಲಿಯಾಗಿ ಅಮಾಯಕ ಸಂತೋಷರಾವ್ ಎಂಬಾತನನ್ನು ಪ್ರಕರಣದಲ್ಲಿ ಸಿಲುಕಿಸಿ ಆತನ ಭವಿಷ್ಯವನ್ನೇ ನಾಶ ಮಾಡಿದ್ದಾರೆ. ಪ್ರಕರಣದ ನೈಜ ಆರೋಪಿಗಳು ಪ್ರಭಾವಿಗಳಾಗಿರುವ ಕಾರಣಕ್ಕೆ ಅವರು ತಮ್ಮ ಶಕ್ತಿ ಬಳಸಿ ಶಾಸಕಾಂಗ ಹಾಗೂ ಕಾರ್ಯಾಂಗದ ಮೇಲೆ ಪ್ರಭಾವ ಬೀರಿ ಈ ಪ್ರಕರಣದ ತನಿಖೆಯ ದಿಕ್ಕು ತಪ್ಪಿಸಿದ್ದಾರೆ ಎಂದರು.

Leave A Reply

Your email address will not be published.

error: Content is protected !!