ಆರೋಗ್ಯ ಇಲಾಖೆ ಯುವ ಜನತ್ಸೋವ-2023 ; ಕಿ.ಮ.ಆ.ಸ ವಿದ್ಯಾರ್ಥಿನಿಯರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

0 38


ಚಿಕ್ಕಮಗಳೂರು : ಆರೋಗ್ಯ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ರೀಲ್ ಮೇಕಿಂಗ್ ಸ್ಪರ್ಧೆಯಲ್ಲಿ ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ,ಸಾರ್ವಜನಿಕ ಶಿಕ್ಷಣ ಇಲಾಖೆ ಚಿಕ್ಕಮಗಳೂರು, ಹಾಗೂ ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಆ.22 ರಂದು ಆರೋಗ್ಯ ಇಲಾಖೆಯ ಕಾರ್ಯಕ್ರಮಗಳ ಕುರಿತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ರೀಲ್ ಮೇಕಿಂಗ್ ಸ್ಪರ್ಧೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಳ ಕಛೇರಿಯಲ್ಲಿ ಆಯೋಜಿಸಲಾಗಿತ್ತು.


ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ನಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಜಿಲ್ಲಾ ಮಟ್ಟದ ಯುವಜನತ್ಸೋವದಲ್ಲಿನ ರೀಲ್ ಮೇಕಿಂಗ್ ಸ್ಪರ್ಧೆಯಲ್ಲಿ ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನವನ್ನು ಮತ್ತು ರಸಪ್ರಶ್ನೆ ಸ್ಪರ್ಧೆಯಲ್ಲಿ ಸೇಂಟ್ ಜೋಸೆಫ್ ಬಾಲಿಕ ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.


ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಮಾಣ ಪತ್ರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ವಿತರಿಸಲಾಯಿತು.
ವಿಜೇತರನ್ನು ಸಭಿನಂದಿಸಿ ಗಣ್ಯರು ಮಾತನಾಡಿ, ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳು ಮತ್ತು ಆರೋಗ್ಯದ ಕುರುತು ಜನರಲ್ಲಿ ಹೆಚ್ಚು ಜಾಗೃತಿಗೊಳಿಸುವಲ್ಲಿ ಯುವಜನರು ಕ್ರಿಯಾಶೀಲತೆಯಿಂದ ಭಾಗವಹಿಸಬೇಕೆಂದು ಕರೆ ನೀಡಿದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆಶ್ವಥ್ ಬಾಬು, ಜಿಲ್ಲಾ ಕಾರ್ಯಕ್ರಮಾಧಿಕಾರಿಗಳಾದ ಡಾ.ಹರೀಶ್ ಬಾಬು,ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಸುಕುಮಾರಿ,ಜಲಜಾಕ್ಷಿ ಮತ್ತು ಇಲಾಖೆಯ ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!