Categories: Chikkamagaluru

ಎಂಎಲ್‍ಸಿ ಸದಸ್ಯತ್ವದ ಬಗ್ಗೆ ಯಾವುದೇ ತೀರ್ಪು ಬಂದಿಲ್ಲ ; ಎಂ.ಕೆ. ಪ್ರಾಣೇಶ್

ಮೂಡಿಗೆರೆ: ನಾಮಿನಿ ಸದಸ್ಯರು ಎಂಎಲ್‍ಸಿ ಚುನಾವಣೆಯಲ್ಲಿ ಮತದಾನ ಮಾಡಬಹುದೇ ಅಥವಾ ಇಲ್ಲವೇ ಎಂಬ ಮೊಕದ್ದಮೆಗೆ ಘನ ನ್ಯಾಯಾಲಯ ತನ್ನ ತೀರ್ಪು ನೀಡಿದೆಯೇ ಹೊರತು ತನ್ನ ವಿಧಾನ ಪರಿಷತ್ ಸದಸ್ಯತ್ವದ ಬಗ್ಗೆ ತೀರ್ಪಿನಲ್ಲಿ ಯಾವುದೇ ಉಲ್ಲೇಖ ಮಾಡಿರುವುದಿಲ್ಲ. ವಿರೋಧ ಪಕ್ಷದ ಪುಕಾರಿಗೆ ಯಾರೂ ಆತಂಕಕ್ಕೊಳಪಡಬೇಕಾಗಿಲ್ಲ ಎಂದು ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಹೇಳಿದರು.


ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ನಾಮಿನಿ ಸದಸ್ಯರು ಮತದಾನ ಮಾಡಬಾರದು ಎಂದು ನ್ಯಾಯಾಲಯದ ಏಕ ಸದಸ್ಯ ಪೀಠವು ದಾವೆ ವೊಂದರಲ್ಲಿ ತೀರ್ಪು ನೀಡಿದ್ದು, ಇದನ್ನು ಹೈಕೋರ್ಟ್‍ನ ದ್ವಿಸದಸ್ಯ ಪೀಠವು ಎತ್ತಿ ಹಿಡಿದಿದೆ. ಈ ತೀರ್ಪನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸುವ ಅವಕಾಶ ಕೂಡ ಇದೆ. ಮುಂದುವರೆದು ಚುನಾವಣಾ ಆಯೋಗ ಸಲ್ಲಿಸಿರುವ ತಕರಾರು, ಇನ್ನೂ ನ್ಯಾಯಾಲಯದ ಕಟಕಟೆಗೆ ಬಂದಿರುವುದಿಲ್ಲ. ಇದು ಜೂ. 9ರಂದು ನ್ಯಾಯಾಲಯದ ಕಲಾಪಕ್ಕೆ ಬರಲಿದ್ದು, ಅಲ್ಲಿ ವಾದ ವಿವಾದ ನಡೆದು ಅದರ ಆದೇಶ ಏನೆಂದು ಪರಿಶೀಲಿಸಬೇಕು. ಈ ಪ್ರಕರಣ ಇನ್ನೂ ಕೇವಲ ಕೋರ್ಟ್ ಸಮನ್ಸ್ ಹಂತದಲ್ಲಿದ್ದು, ಸ್ಪಷ್ಟ ತೀರ್ಪು ಬರಲು ಬಹಳಷ್ಟು ಸಮಯ ತಗುಲಲಿದೆ ಎಂದರು.

Malnad Times

Recent Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

4 hours ago

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

15 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

20 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

1 day ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

2 days ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

2 days ago