ಎರಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ ; ಪ್ರಯಾಣಿಕರಿಗೆ ಗಾಯ

0 817

ಮೂಡಿಗೆರೆ : ಎರಡು ಕೆ.ಎಸ್.ಆರ್.ಟಿ.ಸಿ ಬಸ್‌ಗಳು (KSRTC Bus) ಮುಖಾಮುಖಿ ಡಿಕ್ಕಿಯಾಗಿ (Accident) 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮೂಡಿಗೆರೆ (Mudigere) ಸಮೀಪದ ಘಟ್ಟದಹಳ್ಳಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಮೂಡಿಗೆರೆಯಿಂದ ಬೇಲೂರಿಗೆ ಹೋಗುತ್ತಿದ್ದ ಹಾಗೂ ಬೇಲೂರಿನಿಂದ ಮೂಡಿಗೆರೆಗೆ ಬರುತ್ತಿದ್ದ ಸರ್ಕಾರಿ ಬಸ್‌ಗಳ ನಡುವೆ ಅಪಘಾತವುಂಟಾಗಿದೆ.

ಎರಡು ಬಸ್‌ಗಳಲ್ಲಿದ್ದ ಸುಮಾರು 20 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯರು ಮತ್ತು ಆಂಬುಲೆನ್ಸ್ ಚಾಲಕರ ಸಹಾಯದಿಂದ ಗಾಯಾಳುಗಳನ್ನು ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ಸಾಗಿಸಲಾಗಿದೆ. ಇದರಲ್ಲಿ ಗಂಭೀರ ಗಾಯಗೊಂಡ ಕೆಲವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದು ಅವರನ್ನು ಬೇರೆಡೆಗೆ ಚಿಕಿತ್ಸೆಗೆ ಕರೆದೊಯ್ಯುಲಾಗಿದೆ ಎಂದು ತಿಳಿದುಬಂದಿದೆ.

Leave A Reply

Your email address will not be published.

error: Content is protected !!