ಏ.29 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭ

0 1,168

ಚಿಕ್ಕಮಗಳೂರು: ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ ಇದೇ ಏ. 29 ರಿಂದ ಮೇ 16ರ ವರೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆಯಲಿದ್ದು, ಪೂರಕ ಪರೀಕ್ಷೆಯನ್ನು ಹಾಗೂ ಪರೀಕ್ಷಾ ಪ್ರಕ್ರಿಯೆಯನ್ನು ಸುವ್ಯವಸ್ಥಿತವಾಗಿ ಹಾಗೂ ಶಾಂತಿ ಶಿಸ್ತು ಪಾಲನೆಯೊಂದಿಗೆ ನಡೆಸಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಒಟ್ಟು ಏಳು ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಏಪ್ರಿಲ್ 29 ರಂದು ಕನ್ನಡ, ಅರೇಬಿಕ್, ಏಪ್ರಿಲ್ 30 ರಂದು ಇತಿಹಾಸ, ಭೌತಶಾಸ್ತ್ರ, ಮೇ 02 ರಂದು ಇಂಗ್ಲೀಷ್, ಮೇ 03 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮೇ 04 ರಂದು ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ರಸಾಯನಶಾಸ್ತ್ರ, ಗೃಹ ವಿಜ್ಞಾನ, ಮೂಲಗಣಿತ, ಮೇ 09 ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ ಮತ್ತು ಶಿಕ್ಷಣ ಶಾಸ್ತ್ರ, ಮೇ 11 ರಂದು ಸಮಾಜಶಾಸ್ತ್ರ, ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಮತ್ತು ಗಣಕ ವಿಜ್ಞಾನ, ಮೇ 13 ರಂದು ಅರ್ಥಶಾಸ್ತ್ರ, ಮೇ 14 ರಂದು ಐಚ್ಚಿಕ ಕನ್ನಡ, ಲೆಕ್ಕಶಾಸ್ತ್ರ, ಮೇ 15 ರಂದು ಹಿಂದಿ, ಮೇ 16 ರಂದು ತಮಿಳು, ತೆಲುಗು, ಮಲಯಾಳಂ, ಉರ್ದು, ಮರಾಠಿ, ಸಂಸ್ಕೃತ ಮತ್ತು ಫ್ರೆಂಚ್ ಪರೀಕ್ಷೆಗಳು ನಡೆಯಲಿವೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!