Categories: Chikkamagaluru

ಕಾಡಾನೆ ದಾಳಿಗೆ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ ಕೂಲಿ ಕಾರ್ಮಿಕ ಸಾವು !

ಚಿಕ್ಕಮಗಳೂರು: ಕಾಡಾನೆ ದಾಳಿಗೆ ತಮಿಳುನಾಡು ಮೂಲದ ಕೂಲಿ‌ ಕಾರ್ಮಿಕನೊಬ್ಬ ಮೃತಪಟ್ಟರುವ ಘಟನೆ ತಾಲ್ಲುಕಿನ ಕಂಚೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಶ್ರೀಧರ್ ಬೆಳಗ್ಗೆ ರಮೇಶ್ ಎಂಬುವವರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಒಂಟಿ ಸಲಗವೊಂದು ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರತ್ತ ನುಗ್ಗಿದೆ.
ಕಾಫಿ ತೋಟಕ್ಕೆ ತೆರಳುವ ವೇಳೆ ಕಾರ್ಮಿಕರು ತಪ್ಪಿಸಿಕೊಳ್ಳಲು ಓಡಿದ್ದಾರೆ. ಈ ಸಂದರ್ಭದಲ್ಲಿ ಕಾರ್ಮಿಕ ಶ್ರೀಧರ್ ಆನೆ ಬರುತ್ತಿದ್ದ ದಾರಿಯಲ್ಲೇ ಓಡಿದ್ದರಿಂದ ಕಾಡಾನೆ ಆತನ ಮೇಲೆ ದಾಳಿ ಮಾಡಿದ್ದು, ಈ ವೇಳೆ ಕಾರ್ಮಿಕನನ್ನು ತುಳಿದು ಸಾಯಿಸಿದೆ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿದ್ದಾರೆ. ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ತರಲಾಗಿದೆ. ಈ ವೇಳೆ ಮೃತರ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು.

ಶ್ರೀಧರ್ ಮೂಲತಃ ತಮಿಳುನಾಡು‌ ಮುಲದವರಾಗಿದ್ದು, ಕೂಲಿ ಕೆಲಸ ಅರಸಿ ಕಾಫಿನಾಡಿಗೆ ಬಂದಿದ್ದಾರೆ. ಕಾಫಿ ತೋಟದ ಲೈನ್ ಮನೆಯಲ್ಲಿ ಪತ್ನಿ ಮಕ್ಕಳೊಂದಿಗೆ ವಾಸವಾಗಿದ್ದ ಕುಟುಂಬದವರು ತಾಲ್ಲೂಕು ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಕೆಲಸ ಮಾಡಿಕೊಂಡಿದ್ದರು. ಮೃತರಿಗೆ ಐವರು ಪುತ್ರಿಯರು, ಇಬ್ಬರು ಪುತ್ರರಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago