Categories: Chikkamagaluru

ಕೋಟಾ ಶ್ರೀನಿವಾಸ್ ಪೂಜಾರಿಗೆ ಭಾಷೆ ಅಡ್ಡಿ ಆಗದು ; ಆರಗ ಜ್ಞಾನೇಂದ್ರ

ಚಿಕ್ಕಮಗಳೂರು: ಒಂದೇ ಪಕ್ಷ, ಒಂದೇ ಅಧಿಕಾರ, ಒಂದೇ ಸಿದ್ದಾಂತ ಇರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಭಾಷೆಯ ಅಡ್ಡಿ ಆಗುವುದಿಲ್ಲ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

ಅವರು ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಕಾಂಗ್ರೆಸ್ ಅಭ್ಯರ್ಥಿ ಮಾಡಿರುವ ಆರೋಪಕ್ಕೆ ಉತ್ತರಿಸಿ, ಕೋಟಾ ಶ್ರೀನಿವಾಸ್ ಪೂಜಾರಿಗೆ ಇಂಗ್ಲಿಷ್, ಹಿಂದಿ ಬರಲ್ಲ ಎಂಬುದು ನಿರಾದಾರ ಬದಲಾಗಿ ರಾಷ್ಟ್ರ ಸೇವೆ, ಅಭಿವೃದ್ಧಿ ಮಾಡುವ ಹಂಬಲ ಹೊಂದಿದ್ದಾರೆ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಮೋದಿ ಹೆಸರೇಳಿದವರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಹೇಳಿಕೆ ನೀಡಿರುವುದನ್ನು ಖಂಡಿಸಿದ ಅವರು ಕೂಡಲೇ ಸಚಿವ ತಂಗಡಿಯನ್ನು ಸಚಿವ ಸಂಪುಟದಿಂದ ಕೈ ಬಿಡಬೇಕೆಂದು ಆಗ್ರಹಿಸಿದರು.

ಈ ಹೇಳಿಕೆ ನೀಡುವ ಮೂಲಕ ಸ್ವತಃ ತಂಗಡಿ ಅವರು ನಿರ್ವಹಿಸುತ್ತಿರುವ ಖಾತೆಯ ವಿರುದ್ದವಾಗಿ ಸಂಸ್ಕೃತಿ ಇಲ್ಲದವರಂತೆ ನಡೆದುಕೊಳ್ಳುತ್ತಿದ್ದಾರೆ, ಸಚಿವನಾಗಿ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತನಾಡಿರುವುದು ಸಾಮಾನ್ಯ ಜ್ಞಾನ ಇಲ್ಲದವರಂತೆ ವರ್ತಿಸಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷದ ಇತ್ತೀಚಿನ ನಡವಳಿಕೆಗಳನ್ನು ಗಮನಿಸಿದರೆ ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಇಂತಹ ಕೆಳಮಟ್ಟದ ಹೇಳಿಕೆಗಳಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದರು.

ಕಳೆದ 10 ವರ್ಷಗಳ ಕೇಂದ್ರ ಸರ್ಕಾರದ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶವನ್ನು ಪರಿವರ್ತನೆ ಮಾಡಿದ್ದಾರೆ. ಇದನ್ನು ಕಾಂಗ್ರೆಸ್ ಮುಖಂಡರು ಸಹಿಸಿಕೊಳ್ಳುತ್ತಿಲ್ಲ. ಕಾಂಗ್ರೆಸ್ ಪಕ್ಷದ ಯುಪಿಎ ಸರ್ಕಾರದಲ್ಲಿ ಭಿಕ್ಷುಕರ, ಹಾವಾಡಿಗರ ದೇಶವಾಗಿದ್ದ ಭಾರತವನ್ನು ಇಡೀ ಪ್ರಪಂಚ ಆರ್ಥಿಕವಾಗಿ ಸದೃಢಗೊಳಿಸಿ, 5ನೇ ಸ್ಥಾನದಲ್ಲಿರುವುದನ್ನು ಇತರೆ ರಾಷ್ಟ್ರಗಳು ತಿರುಗಿ ನೋಡುವಂತೆ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ, ರೈಲ್ವೆ, ವಿಮಾನ ನಿಲ್ದಾಣ, ನೀರಾವರಿ ಯೋಜನೆಗಳು, ಸ್ಮಾರ್ಟ್ ಸಿಟಿ, ಸೈನ್ಯ ಬಲವರ್ಧನೆ, ಬೇರೆ ದೇಶಗಳಿಂದ ಸಾಲ ಪಡೆಯದೆ, ಧನ ಸಹಾಯ ಮಾಡಿದ್ದಾರೆ. ಕಳೆದ 10 ವರ್ಷಗಳ ಆಡಳಿತದಲ್ಲಿ ಅಗಾಧವಾದ ಪರಿವರ್ತನೆ ಮಾಡಿರುವುದು ಕಾಂಗ್ರೆಸ್ ಸಹಿಸಿಕೊಳ್ಳುತ್ತಿಲ್ಲವೆಂದು ಲೇವಡಿ ಮಾಡಿದರು.

ಪ್ರಧಾನಿ ನರೇಂದ್ರ ಮೋದಿಯವರ ಗಟ್ಟಿ ಆಡಳಿತವನ್ನು ಸಹಿಸಿಕೊಳ್ಳಲಾಗದ ಕಾಂಗ್ರೆಸ್ ಎಲ್ಲಾ ರಂಗದಲ್ಲಿ ವಿಫಲವಾಗಿದೆ ಎಂದು ದೂರಿದರು.

ಪಾಕಿಸ್ತಾನ ಜಿಂದಾಬಾದ್, ರಾಮೇಶ್ವರಂ ಕೆಫೆ ಬಾಂಬ್ ಪ್ರಕರಣ, ರಾಜ್ಯ ಆರ್ಥಿಕ ದಿವಾಳಿಯಾಗಿದ್ದು, ಇವೆಲ್ಲವನ್ನು ಮರೆಮಾಚಿ ಕೇವಲ ಬಿಜೆಪಿ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ದೂರಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್ ದೇವರಾಜಶೆಟ್ಟಿ, ನಗರಾಧ್ಯಕ್ಷ ಮಧುಕುಮಾರ್ ರಾಜ್ ಅರಸ್, ವಕ್ತಾರರಾದ ಹೆಚ್.ಎಸ್ ಪುಟ್ಟಸ್ವಾಮಿ, ಸೋಮಶೇಖರ್ ಉಪಸ್ಥಿತರಿದ್ದರು.

Malnad Times

Recent Posts

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

6 hours ago

Rain Alert | ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…

6 hours ago

ಕಾಫಿನಾಡಿನಲ್ಲಿ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಸುರಿದ ಭಾರಿ ಮಳೆ

ಚಿಕ್ಕಮಗಳೂರು: ಕಳೆದ ಹಲವು ದಿನಗಳಿಂದ ಬೇಸಿಗೆಯ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಮಂಗಳವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಭಾರಿ…

8 hours ago

ಪತಿ ಸಾವಿನ ನೋವಿನಲ್ಲೂ ಮತದಾನ ಮಾಡಿದ ಮಹಿಳೆ !

ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…

18 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆ | ಶೇ. 78.24 ಮತದಾನ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…

19 hours ago

Accident | ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಸಾವು !

ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

20 hours ago