Categories: Chikkamagaluru

ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಹಕ್ಕು, ಫಲಾನುಭವಿಗಳನ್ನು ಅವಮಾನಿಸುವುದನ್ನು ತಕ್ಷಣ ನಿಲ್ಲಿಸಿ ; ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಚಿಕ್ಕಮಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ನಾಲ್ಕೂವರೆ ಕೋಟಿ ಫಲಾನುಭವಿಗಳಿಗೆ ಬಿಜೆಪಿ ನಿರಂತರವಾಗಿ ಅವಮಾನಿಸುತ್ತಿದೆ. ಒಂದು ಕಡೆ ಅವಮಾನಿಸುತ್ತಲೇ ಮತ್ತೊಂದು ಕಡೆ ವಿಪರೀತ ಸುಳ್ಳುಗಳನ್ನು ಹೇಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದರು.

ನಗರದ ಜಿಲ್ಲಾ ಆಟದ ಮೈದಾನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮತ್ತು ನಾನಾ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ ಮಾತನಾಡಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಬಿಜೆಪಿ ಬೆಂಬಲಿಗರು ಇಲ್ಲವೇ ಸಿ.ಟಿ.ರವಿ? ಈ ಪ್ರಶ್ನೆಗೆ ಬಹಿರಂಗವಾಗಿ ಉತ್ತರಿಸಲು ಬಿಜೆಪಿಗೆ ಸವಾಲು ಹಾಕಿದ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಹಕ್ಕು. ಫಲಾನುಭವಿಗಳನ್ನು ಅವಮಾನಿಸುವುದನ್ನು ತಕ್ಷಣ ನಿಲ್ಲಿಸಿ ಎಂದು ಎಚ್ಚರಿಸಿದರು.

ಐದಕ್ಕೆ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲಿಸಿದ ಜಿಲ್ಲೆಯ ಜನತೆಯ ಸಮಯಪ್ರಜ್ಞೆ ಮತ್ತು ರಾಜಕೀಯ ಪ್ರಜ್ಞೆಗೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು, ನಿಮಗೆ ಬಿಜೆಪಿ ಸರ್ಕಾರದ ಅಚ್ಛೆ ದಿನಗಳು ಬಂದಿದೆಯಾ ? ಎಂದು ಪ್ರಶ್ನಿಸಿದರು. ನೆರೆದಿದ್ದ ಜನರು ಇಲ್ಲ ಇಲ್ಲ ಎಂದು ಕೂಗಿದರು.

ಅಭಿವೃದ್ಧಿ ಶೂನ್ಯ ಬಿಜೆಪಿ, ಸುಳ್ಳುಗಳ ಉತ್ಪಾದನೆ ಮಾಡುತ್ತಿದೆ. ಸುಳ್ಳುಗಳ ಆಧಾರದಲ್ಲೇ ದೇಶವನ್ನು ಆಳುವ ಸರ್ಕಸ್ ಮಾಡುತ್ತಿದೆ. ಬಿಜೆಪಿ ಯಾವಾಗಲೂ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತದೆ. ಆದರೆ, ಕಾಂಗ್ರೆಸ್, ಹಸಿವು ಮುಕ್ತ ಭಾರತ ನಿರ್ಮಿಸಲು ನಿರಂತರವಾಗಿ ಕೆಲಸ ಮಾಡುತ್ತಿದೆ. ನೀವು ಸ್ವತಂತ್ರ ಭಾರತದ ಇತಿಹಾಸ ನೋಡಿದರೆ ಹಸಿವು ಮುಕ್ತ ಭಾರತಕ್ಕಾಗಿ ಕಾಂಗ್ರೆಸ್ ಏನೆಲ್ಲಾ ಕಾರ್ಯಕ್ರಮಗಳನ್ನು ಜಾರಿ ಮಾಡಿತು ಎನ್ನುವ ಪಟ್ಟಿಯೇ ಸಿಗುತ್ತದೆ ಎಂದರು.

ಕುವೆಂಪು ಅವರ ಸರ್ವೋದಯವಾಗಲಿ ಸರ್ವರಲಿ ಎನ್ನುವ ಮೌಲ್ಯವನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು ಸರ್ವರ ಉದಯಕ್ಕಾಗಿನೇ ಕಾಂಗ್ರೆಸ್ ಶ್ರಮಿಸುತ್ತಿದೆ. ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ನಾಲ್ಕೂವರೆ ಕೋಟಿ ಜನರ ಮನೆ ಬಾಗಿಲು ಬಡಿದಿದೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ಬಿಜೆಪಿ ರಾಜ್ಯದ ಜನರ ಬದುಕನ್ನು ಪಕ್ಕಕ್ಕಿಟ್ಟು ಕೇವಲ ಭಾವನೆಗಳನ್ನು ಕೆರಳಿಸುತ್ತದೆ. ಇದುವರೆಗೂ ರಾಜ್ಯದಲ್ಲಿ ಬಿಜೆಪಿ ಒಂದು ಭಾರಿಯೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದರೇ ಹೊರತು ಸ್ವಂತ ಶಕ್ತಿ ಮೇಲೆ ಅಧಿಕಾರ ನಡೆಸಿಯೇ ಇಲ್ಲ. ನಾವು 2013, 2023 ಎರಡೂ ಬಾರಿಯೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿದ್ದೇವೆ ಎನ್ನುತ್ತಾ, ಅಲ್ವಾ ತಮ್ಮಯ್ಯ ಎಂದು ಚಿಕ್ಕಮಗಳೂರು ಶಾಸಕರನ್ನು ಪ್ರಶ್ನಿಸಿ ಬಿಜೆಪಿಗೆ ತಿವಿದರು.

4 ಕೋಟಿ 64 ಲಕ್ಷ ಜನರಿಗೆ ನಮ್ಮ ಗ್ಯಾರಂಟಿಗಳು ತಲುಪಿ ಅವರಿಗೆ ಸ್ವಲ್ಪ ಸಮಾಧಾನ ತಂದಿದೆ. ಅವರ ಜೇಬಿಗೆ ನೇರವಾಗಿ ನಾವು ಹಣ ಹಾಕುತ್ತಿರುವುದರಿಂದ ನಮ್ಮ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ. ಇದರ ಪರಿಣಾಮ ರಾಜ್ಯದ ಆರ್ಥಿಕತೆಗೆ ಬಡವರು ಶಕ್ತಿ ತುಂಬಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವೆ ಮೋಟಮ್ಮ, ಜಿಲ್ಲೆಯ ಶಾಸಕರುಗಳಾದ ನಯನ ಮೋಟಮ್ಮ, ಆನಂದ್, ಟಿ.ಡಿ.ರಾಜೇಗೌಡ, ಶ್ರೀನಿವಾಸ್, ಎಚ್.ಡಿ.ತಮ್ಮಯ್ಯ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ನಾಯಕರು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago