Categories: Chikkamagaluru

ಜಾನಪದ ಪರಿಷತ್ತಿನ ಕಾರ್ಯಕ್ರಮಗಳಿಗೂ ಅನುದಾನ ನೀಡುವಂತೆ ಸಿಎಂಗೆ ಒತ್ತಾಯ

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಿಗೆ ನೀಡುವ ರೀತಿ ಕರ್ನಾಟಕ ಜಾನಪದ ಪರಿಷತ್ತಿನ ಕಾರ್ಯಕ್ರಮಗಳಿಗೂ ಅನುದಾನ ನೀಡುವಂತೆ ಮುಖ್ಯ ಮಂತ್ರಿಗಳನ್ನು ಒತ್ತಾಯಿಸಲಾಗುವುದು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ನಗರದ ಕುವೆಂಪು ಕಲಾ ಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ನಾಲ್ಕನೇ ಜಿಲ್ಲಾ ಜಾನಪದ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿ ಸದ್ಯದಲ್ಲೇ ತಾವು ಮತ್ತು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ರಾಜ್ಯದಲ್ಲಿ ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಜಾನಪದ ಪರಿಷತ್ತಿನ ಕಾರ್ಯಕ್ರಮಗಳಿಗೂ ಅನುದಾನ ನೀಡುವಂತೆ ಮನವೊಲಿಸಲಾಗುವುದು ಎಂದು ಭರವಸೆ ನೀಡಿದರು.

ಸಾಹಿತ್ಯ, ಸಂಸ್ಕೃತಿ ಮತ್ತು ಕಲೆ ಉಳಿದಿರುವುದು ಪ್ರಪಂಚದಲ್ಲಿ ಭಾರತದಲ್ಲಿ ಮಾತ್ರ ಅದೇ ರೀತಿ ಜಾನಪದ ಕಲೆ ಉಳಿದಿರುವುದು ನಮ್ಮ ರಾಜ್ಯ ಮತ್ತು ನಮ್ಮ ಜಿಲ್ಲೆಯಲ್ಲಿ ಮಾತ್ರ ಎಂದ ಅವರು, ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಉಳಿಸುವ ಮಹತ್ತರ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ ಜಾನಪದ ಕಲೆ, ಸಾಹಿತ್ಯ, ಸಂಸ್ಕೃತಿ, ದಾಸಸಾಹಿತ್ಯ, ತತ್ವಪದ ಮತ್ತು ವಚನ ಸಾಹಿತ್ಯದ ಅಡಿಯಲ್ಲಿ ಮತ್ತು ಸಂಬಂಧಗಳ ಅಡಿಯಲ್ಲಿ ನಮ್ಮ ಹಿರಿಯರು ಈ ನಾಡನ್ನು ಕಟ್ಟಿ ಬೆಳೆಸಿದ್ದಾರೆ. ಆದರೆ, ಇಂದು ತಂದೆ ತಾಯಿ, ಅಕ್ಕ ತಂಗಿ, ಅಣ್ಣ ತಮ್ಮ ಸೇರಿದಂತೆ ಯಾವುದೇ ಸಂಬಂಧಗಳೂ ಉಳಿದಿಲ್ಲ ಎಂದು ವಿಷಾಧಿಸಿದರು.

ಜಾನಪದವನ್ನು ಪುನರುತ್ತಾನಗೊಳಿಸಿ ಶ್ರೀಮಂತಗೊಳಿಸಿದರೆ ನಮ್ಮ ಬದುಕು, ನಮ್ಮ ನಾಡು ಶ್ರೀಮಂತವಾಗುತ್ತದೆ ಹಾಹಾಗಿ ಜಾನಪದವನ್ನು ಶ್ರೀಮಂತಗೊಳಿಸಲಾಗಿದೆ. ನಾಡಿನಲ್ಲಿ ಮಾನವೀಯ ಮೌಲ್ಯಗಳು ಉಳಿಯಬೇಕಾದರೆ ನಮ್ಮಲ್ಲಿನ ಸ್ವಾರ್ಥ ತೊಲಗಿ ಸಂಬಂಧಗಳು ಗಟ್ಟಿಯಾಗಬೇಕಾದರೆ ಜಾನಪದವನ್ನು ಶ್ರೀಮಂತಗೊಳಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷ ಬೆಳವಾಡಿ ಪರಮೇಶ್ವರಪ್ಪ ಮಾತನಾಡಿ, ರಾಜ್ಯ ಸರ್ಕಾರ ಕಲಾವಿದರ ವಯಸ್ಸನ್ನು ಪರಿಗಣಿಸದೆ ಯುವ ಕಲಾವಿದರಿಗೂ ಮಾಶಾಸನವನ್ನು ನೀಡಬೇಕು ಎಂದು ಒತ್ತಾಯಿಸಿದರು.

ಜಾನಪದ ಕಲಾವಿದರಿಗೆ ಮಾಶಾಸನ ನೀಡಲು ರಾಜ್ಯ ಸರ್ಕಾರ 60 ವರ್ಷ ವಯಸ್ಸನ್ನು ನಿಗದಿಗೊಳಿಸಿದೆ. ಇದರಿಂದಾಗಿ ವಯೋವೃದ್ಧ ಕಲಾವಿದರು ಮಾತ್ರ ಕಂಡು ಬರುತ್ತಿದ್ದಾರೆ. ಯುವ ಜನತೆ ಕಲೆ ಕಲಿಯಲು ಆಸಕ್ತಿ ತೋರುತ್ತಿಲ್ಲ ಎಂದು ವಿಷಾಧಿಸಿದರು.

ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನಗಳಿಗೆ ನೀಡುತ್ತಿರುವಂತೆ ರಾಜ್ಯ ಸರ್ಕಾರ ಜಾನಪದ ಸಮ್ಮೇಳನಗಳಿಗೂ ಅನುದಾನವನ್ನು ನೀಡಬೇಕು ಎಂದು ಒತ್ತಾಯಿಸಿದರು. ಈ ಕುರಿತು ರಾಜ್ಯ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವಂತೆ ವೇದಿಯಲ್ಲಿದ್ದ ಶಾಸಕರಾದ ಎಚ್.ಡಿ.ತಮ್ಮಯ್ಯ ಮತ್ತು ಎಸ್.ಎಲ್.ಭೋಜೇಗೌಡ ಅವರಿಗೆ ಮನವಿ ಮಾಡಿದರು.

ಜಾನಪದ ಲೋಕ ಅನಾವರಣ :

ಚಿಕ್ಕಮಗಳೂರು: ಜಾನಪದವನ್ನು ಪುನರುತ್ಥಾನಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕ ನಗರದ ಕುವೆಂಪು ಕಲಾ ಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ನಾಲ್ಕನೇ ಜಿಲ್ಲಾ ಜಾನಪದ ಸಮ್ಮೇಳನ ಕಲಾಮಂದಿರದಲ್ಲಿ ಜಾನಪದ ಲೋಕವನ್ನು ಅನಾವರಣಗೊಳಿಸಿತು.

ಸಮ್ಮೇಳನದಲ್ಲಿ ಪ್ರಾರ್ಥನೆ, ಸ್ವಾಗತದಿಂದ ಹಿಡಿದು ವಂದನಾರ್ಪಣೆಯವರೆಗೆ ನಡೆದ ಎಲ್ಲಾ ಕಾರ್ಯಕ್ರಮಗಳೂ ಜಾನಪದಮಯವಾಗಿದ್ದವು, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಕಜಾಪ ರಾಜ್ಯಾಧ್ಯಕ್ಷ ಪ್ರೊ. ಹಿ.ಶಿ.ರಾಮಚಂದ್ರೇ ಗೌಡ, ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ಸೇರಿದಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರೂ ಭಾಷಣದ ವೇಳೆ ಜಾನಪದ ಗೀತೆಗಳನ್ನು ಹಾಡಿ ರಂಜಿಸಿದರು. ಗ್ರಾಮೀಣ ವಾದ್ಯಗಳ ಭರಾಟೆ ವೀರಗಾಸೆಯ ಅಬ್ಬರ ಕಲಾಮಂದಿರದಲ್ಲಿ ಅನುರಣಿಸಿತು.

ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಕುರಿತ ಗೋಷ್ಠಿಗಳು ಉಪನ್ಯಾಸ, ಜಾನಪದ ಗೀತೆಗಳ ಗಾಯನ, ನೃತ್ಯ ಜರುಗಿದವು. ಬೆಳಿಗ್ಗೆ ಕಲಾಮಂದಿರದಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ತಾಲೂಕು ಅಧ್ಯಕ್ಷ ಅತ್ತಿಕಟ್ಟೆ ಗುರುನಾಥ ಗೌಡ ರಾಷ್ಟ್ರಧ್ವಜಾರೋಹಣ ಹಿರಿಯ ವೀರಗಾಸೆ ಕಲಾವಿದ ಡಾ. ಮಾಳೇನಹಳ್ಳಿ ಬಸಪ್ಪ ನಾಡಧ್ವಜ ಕಜಾಪ ಜಿಲ್ಲಾಧ್ಯಕ್ಷ ಜೆ.ಬಿ.ಸುರೇಶ್ ಜಾನಪದ ಧ್ವಜಾರೋಹಣವನ್ನು ನೆರವೇರಿಸಿದರು.

ತಾಲೂಕು ಕಚೇರಿ ಆವರಣದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ವಿವಿಧ ಜಾನಪದ ಕಲಾತಂಡಗಳ ನಡುವೆ ಸಮ್ಮೇಳನಾಧ್ಯಕ್ಷ ಹಿರಿಯ ಭಜನಾ ಕಲಾವಿದ ಬೆಳವಾಡಿ ಪರಮೇಶ್ವರಪ್ಪ ಅವರನ್ನು ಸಾರೋಟಿನಲ್ಲಿ ಕುಳ್ಳಿರಿಸಿ, ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಕಲಾಮಂದಿರಕ್ಕೆ ಕರೆ ತರಲಾಯಿತು.

ಪುರುಷರು ಮತ್ತು ಮಹಿಳೆಯರ ವೀರಗಾಸೆ, ಡೊಳ್ಳುಕುಣಿತ, ಗ್ರಾಮೀಣ ವಾದ್ಯ ಗಳು, ಭಜನಾ ತಂಡಗಳು, ಚಾಮ ಕುಣಿತ, ಪೂಜಾ ಕುಣಿತ, ಕೋಲಾಟ, ದಕ್ಷಿಣ ಕನ್ನಡದ ತಟ್ಟಿ ಗೊಂಬೆಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಮಾರ್ಗದುದ್ದಕ್ಕೂ ಜಾನಪದದ ವೈಭವವನ್ನು ಅನಾವರಣಗೊಳಿಸಿದವು. ಪೂರ್ಣಕುಂಭ ಹೊತ್ತ ನೂರಾರು ಮಹಿಳೆಯರು ಮೆರವಣಿಗೆಯಲ್ಲಿ ಪಾಳ್ಗೊಂಡಿದ್ದರು.

ಮೆರವಣಿಗೆ ನಂತರ ಕಲಾಮಂದಿರದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ ಸಮ್ಮೇಳನ ವನ್ನು ಉದ್ಘಾಟಿಸಿದರು. ಜಾನಪದ ವಸ್ತುಗಳ ಪ್ರದರ್ಶನವನ್ನು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಉದ್ಘಾಟಿಸಿದರು. ಜಾನಪದ ವಾದ್ಯಗಳ ವೈಭ ವಕ್ಕೆ ಹಿರಿಯ ಪತ್ರಕರ್ತ ಸ.ಗಿರಿಜಾಶಂಕರ್ ಚಾಲನೆ ನೀಡಿದರು. ಕ.ಜಾ.ಪ ರಾಜ್ಯಾಧ್ಯಕ್ಷ ಪ್ರೊ.ಹಿ.ಶಿ.ರಾಮಚಂದ್ರೇಗೌಡ ಜಾನಪದ ಸಿರಿ ಪ್ರಶಸ್ತಿ, ಸ್ಮರಣಿಕೆಗಳನ್ನು ಬಿಡುಗಡೆಗೊಳಿಸಿದರು.

ಸಮ್ಮೇಳನಾಧ್ಯಕ್ಷ ಹಿರಿಯ ಭಜನಾ ಕಲಾವಿದ ಬೆಳವಾಡಿ ಪರಮೇಶ್ವರಪ್ಪ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. 18 ಜಾನಪದ ಕಲಾವಿದರಿಗೆ ಜಾನಪದ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಿರಿಯ ಪತ್ರಕರ್ತ ಸ.ಗಿರಿಜಾಶಂಕರ್ ಆಶಯ ನುಡಿಗಳನ್ನಾಡಿದರು.

ಆಶಾ ಕಿರಣ ಅಂದಮಕ್ಕಳ ಶಾಲೆಯ ಅಧ್ಯಕ್ಷ ಡಾ.ಜೆ.ಪಿ.ಕೃಷ್ಣೇಗೌಡ, ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್, ಜಿಲ್ಲಾ ಕಾಂಗ್ರೆಸ್ ಮುಖಂಡ ಡಾ.ಡಿ.ಎಲ್. ವಿಜಯಕುಮಾರ್, ಜಾನಪದ ಅಕಾಡೆಮಿ ಮಾಜಿಸದಸ್ಯೆ ಮುಗುಳಿ ಲಕ್ಷ್ಮೀದೇವಮ್ಮ,
ಸಾಹಿತಿ ಜಿ.ಬಿ.ವೀರೂಪಾಕ್ಷ, ಕಜಾಪ ಹರಿಹರಪುರ ಹೋಬಳಿ ಅಧ್ಯಕ್ಷೆ ತಮನ್ನಾ ಮುನಾವರ್ ಸೇರಿದಂತೆ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲೆಯ ಎಲ್ಲಾ ತಾಲೂಕುಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಾನಪದ ಸಮ್ಮೇಳನದ ಅಂಗವಾಗಿ ಕಲಾಮಂದಿರದಲ್ಲಿ ಏರ್ಪಡಿಸಿದ್ದ ಜಾನಪದ ಪರಿಕರಗಳ ವಸ್ತು ಪ್ರದರ್ಶನ ಸಾರ್ವಜನಿಕರ ಗಮನ ಸೆಳೆಯಿತು.

ಜಾನಪದರು ಬಳಸುತ್ತಿದ್ದ ಪ್ರಾಚೀನ ಕಾಲದ ನೀರು ಸೇದುವ ರಾಟೆ, ಕೃಷಿ ಪರಿಕರ ಗಳು, ರಾಗಿ ಬೀಸುವ ಕಲ್ಲು, ಮೀನು ಹಿಡಿಯುವ ಕೂಣಿ, ಹಸೆಮಣೆ ಸೇರಿದಂತೆ ಪ್ರದರ್ಶನದಲ್ಲಿ ಇಡಲಾಗಿದ್ದ ವಸ್ತುಗಳು ನೋಡುಗರ ಕಣ್ಮನ ಸೆಳೆದವು.

Malnad Times

Recent Posts

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 hours ago

Rain Alert | ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…

4 hours ago

ಕಾಫಿನಾಡಿನಲ್ಲಿ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಸುರಿದ ಭಾರಿ ಮಳೆ

ಚಿಕ್ಕಮಗಳೂರು: ಕಳೆದ ಹಲವು ದಿನಗಳಿಂದ ಬೇಸಿಗೆಯ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಮಂಗಳವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಭಾರಿ…

5 hours ago

ಪತಿ ಸಾವಿನ ನೋವಿನಲ್ಲೂ ಮತದಾನ ಮಾಡಿದ ಮಹಿಳೆ !

ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…

15 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆ | ಶೇ. 78.24 ಮತದಾನ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…

16 hours ago

Accident | ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಸಾವು !

ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

18 hours ago