Categories: Chikkamagaluru

ಜಿಲ್ಲಾ ಪಂಚಾಯಿತಿ ಸಿಇಓ ರವರಿಂದ ಗಿರಿ ಸ್ವಚ್ಚತೆ


ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಸೀತಾಳಯ್ಯನ ಗಿರಿಯಿಂದ ಮುಳಯ್ಯನ ಗಿರಿವರೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹೋಪ್ ಫೌಂಡೇಶನ್ ಬೆಂಗಳೂರು ರವರ ವತಿಯಿಂದ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ  ಡಾ. ಗೋಪಾಲ ಕೃಷ್ಣ .ಬಿ ರವರು ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ಲಾಸ್ಟಿಕ್ ಸಂಗ್ರಹಿಸಿದರು. ನಂತರ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಏಕ ಬಳಕೆಯ ಪ್ಲಾಸ್ಟಿಕ್ ಬಳಸದಂತೆ ಸೂಚನೆ ನೀಡಿದರು.
ಕರ್ನಾಟಕದ ಅತ್ಯಂತ ಎತ್ತರದ ಶಿಖರವಾದ ಮುಳಯ್ಯನಗಿರಿ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದಲೂ ಚಿಕ್ಕಮಗಳೂರಿನ ಪ್ರಕೃತಿಯನ್ನು ಸವಿಯಲು ಬರುತ್ತಾರೆ. ಹೊರಗಿನಿಂದ ಬರುವ ಪ್ರವಾಸಿಗರು ಪರ್ವತ ಶ್ರೇಣಿಯಲ್ಲಿ ಬೇಜವಾಬ್ದಾರಿಯಿಂದ ವತಿಸುತ್ತಿದ್ದು, ನೀರಿನ ಬಾಟಲ್, ತಿಂಡಿ ತಿನಿಸುಗಳ ಪ್ಲಾಸ್ಟಿಕ್ ಕವರ್ ಅನ್ನು ಎಲ್ಲೆಂದಲ್ಲಿ ಎಸೆಯುವುದು, ಮದ್ಯ ಪಾನ ಮಾಡಿ ಅಲ್ಲೇ ಬಾಟಲ್‌ಗಳನ್ನು ಎಸೆದು ಗಿರಿ ಪ್ರದೇಶವನ್ನು ಮಾಲಿನ್ಯ ಗೊಳಿಸುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಸೂಕ್ತಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಇಓರವರು ತಿಳಿಸಿದರು.


ನಂತರ ಅಲ್ಲಿನ ಅಂಗಡಿಗಳಿಗೆ ಭೇಟಿ ನೀಡಿ ಏಕ ಬಳಕೆಯ ಪ್ಲಾಸಿಕ್ಟ್ ಬಳಸದಂತೆ ಸೂಚನೆ ನೀಡಿದರು. ಪ್ರವಾಸಿಗರು ತಿನ್ನುವುದಿದ್ದರೆ ಕೆಳಗಡೆ ತಿನ್ನಲಿ, ಮೇಲಿನ ದೇವಸ್ಥಾನಕ್ಕೆ ಹೋಗಿ ಅಲ್ಲಿನ ಪ್ರಕೃತಿಯನ್ನು ಮಾಲಿನ್ಯ ಮಾಡಲು ಬೀಡಬೇಡಿ ಎಂದು ತಿಳಿಸಿದರು. ಗ್ರಾಮ ಪಂಚಾಯಿತಿಯಿಂದ ಕಸದ ವಾಹನವನ್ನು ಕಳಿಸುವ ವ್ಯವಸ್ಥೆ ಮಾಡಲಾಗುತ್ತದೆ. ಮುಂದಿನ ದಿನಗಳಲ್ಲಿ ಅಂಗಡಿಗಳಿಂದ ಎಷ್ಟು ಘನತ್ಯಾಜ್ಯವನ್ನು ಸೃಷ್ಟಿ ಮಾಡುತ್ತಾರೆ. ಅದಕ್ಕೆ ಸೂಕ್ತ ಕರ ವಸೂಲಿ ಮಾಡಲಾಗುತ್ತದೆ ಎಂದು ತಿಳಿಸಿದರು. ಪ್ಲಾಸ್ಟಿಕ್ ಬಳಕೆಯನ್ನು ಮುಂದುವರೆಸಿದರೆ ಅವರ ಅಂಗಡಿ ಪರವಾನಗಿಯನ್ನು ರದ್ದು ಪಡಿಸಲಾಗುತ್ತದೆ ಎಂದು ತಿಳಿಸಿದರು.


ಸ್ವಚ್ಚತಾ ಕಾರ್ಯಕ್ರಮದಲ್ಲಿ ಬೆಂಗಳೂರಿನ ಹೋಪ್ ಫೌಂಡೇಶನ್ ಯುವ ಉತ್ಸಾಹಿಗಳು ಪಾಲ್ಗೊಂಡು ಪರ್ವತ ಶ್ರೇಣಿಯಲ್ಲಿ ಹರಡಿದ್ದ ಪ್ಲಾಸ್ಟಿಕ್ ಅನ್ನು ಸಂಗ್ರಹಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿಗಳಾದ (ಅಭಿವೃದ್ಧಿ) ಸೋಮಶೇಖರ್ ವೈ ರವರು, ಯೋಜನಾ ನಿರ್ದೇಶಕರಾದ ಅಪೂರ್ವ ಸಿ ಅನಂತರಾಮುರವರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿಯ ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಂಡು ಪ್ಲಾಸ್ಟಿಕ್ ಅನ್ನು ಸಂಗ್ರಹಿಸಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago