ಚಿಕ್ಕಮಗಳೂರು: ಚುನಾವಣಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸೀರೆಗಳು, ದೋತಿ ಕೊಪ್ಪದ ಗಡಿಕಲ್ ಹಾಗೂ ತರೀಕೆರೆ ಎಂ.ಎನ್ ಕ್ಯಾಂಪ್ ಚೆಕ್ ಪೋಸ್ಟ್ 95 ಸಾವಿರ ನಗದು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಚುನಾವಣೆ ಘೋಷಣೆಯಾಗಿದ್ದು ಜಿಲ್ಲಾಡಳಿತ ಎಲ್ಲೆಡೆ ವ್ಯಾಪಕ ಕಟ್ಟೆಚ್ಚರ ವಹಿಸಿದೆ. ಜಿಲ್ಲೆಯ ಗಡಿಭಾಗಗಳಲ್ಲಿ ಚೆಕ್ ಪೋಸ್ಟ್ಗಳನ್ನು ನಿರ್ಮಿಸಿ ಈಗಾಗಲೇ ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ವಹಿಸಿದೆ.
ಸೋಮವಾರ ಕೊಪ್ಪ ತಾಲೂಕಿನ ಗಡಿಕಲ್ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಒಂದು ಲಕ್ಷದ ಇಪ್ಪತೈದು ಸಾವಿರ ಬೆಲೆ ಬಾಳುವ ನೂರಾರು ಸೀರೆಗಳು ಹಾಗೂ ದೋತಿಗಳನ್ನು ಹಾಗೂ ಅದನ್ನು ತುಂಬಿದ್ದ ವಾಹನವನ್ನು ಎಸ್.ಎಸ್.ಟಿ ತಂಡ ವಶಕ್ಕೆ ಪಡೆದಿದೆ.
ಇನ್ನೊಂದೆಡೆ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಎಂ.ಎನ್ ಕ್ಯಾಂಪ್ ಚೆಕ್ ಪೋಸ್ಟ್ ನಲ್ಲಿ ದಾಖಲೆ ರಹಿತವಾಗಿ ಸ್ಕೂಟಿಯೊಂದರಲ್ಲಿ ಕೊಂಡೊಯ್ಯುತ್ತಿದ್ದ 95 ಸಾವಿರ ರೂ. ಹಣವನ್ನು ಸೀಜ್ ಮಾಡಲಾಗಿದೆ.
ಈ ಹಣ ಹಾಗೂ ಸೀರೆಗಳು ಯಾವುದೇ ಚುನಾವಣೆ ಅಕ್ರಮಕ್ಕೆ ಸಂಬಂಧಿಸಿಲ್ಲ ಆದರೂ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ದಾಖಲೆ ಸರಿಯಾಗಿ ಇಲ್ಲದ ಕಾರಣ ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…