ಚಿಕ್ಕಮಗಳೂರು: ದಾಖಲೆ ಇಲ್ಲದೇ ಬಲೆನೋ ಕಾರಿನಲ್ಲಿ ಸಾಗಿಸುತ್ತಿದ್ದ 18 ಚಿನ್ನದ ಉಂಗುರಗಳನ್ನು ವಸ್ತಾರೆ ಪೊಲೀಸ್ ಜಂಕ್ಷನ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಾಹನ ತಡೆದು ರ್ಯಾಂಡಂ ತಪಾಸಣೆ ನಡೆಸುವ ವೇಳೆ 90 ಗ್ರಾಂ ನ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಲೋಕಸಭಾ ಚುನಾವಣೆ ಹಿನ್ನೆಲೆ ಜಿಲ್ಲೆಯ ಗಡಿಭಾಗಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿರುವಂತೆ ಜಿಲ್ಲೆಯ ಆಂತರಿಕ ಭದ್ರತೆ ನಿಟ್ಟಿನಲ್ಲಿ ತಾಲೂಕ ತಾಲೂಕು ಮಧ್ಯೆ ಸಹಾ ಜಂಕ್ಷನ್ ಪಾಯಿಂಟ್ ಗಳನ್ನು ತೆರೆಯಲಾಗಿದ್ದು ಇಂದು ನಗರದ ಹೊರವಲಯದ ವಸ್ತಾರೆ ಗ್ರಾಮದ ಬಳಿ ದಾಖಲೆ ಇಲ್ಲದೇ ಬಲೆನೋ ವಾಹನದಲ್ಲಿ ಸಾಗಿಸುತ್ತಿದ್ದ ಒಟ್ಟು 90 ಗ್ರಾಂ ನ 18 ಚಿನ್ನದ ಉಂಗುರಗಳನ್ನು ವಶಕ್ಕೆ ಪಡೆಯಲಾಗಿದೆ.
ಚಿಕ್ಕಮಗಳೂರು ನಗರದ ವಿಜಯಪುರದ ಚಿನ್ನದ ವ್ಯಾಪಾರಿ ಒಬ್ಬರು ಗಟ್ಟಿ ಖರೀದಿಸಿ ಅದರಿಂದ ಉಂಗುರಗಳನ್ನು ತಯಾರಿಸಿ ಉಡುಪಿಯ ಜ್ಯುವೆಲರಿ ಅಂಗಡಿ ಮಾಲೀಕರಿಗೆ ಕೊಡಲು ತೆಗೆದುಕೊಂಡು ಹೋಗುವ ವೇಳೆ ತಪಾಸಣೆ ನಡೆಸಿದ ಪೊಲೀಸರು ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…