ಧರ್ಮ ಕಾರ್ಯಗಳಿಗೆ ಭಕ್ತರ ಸಹಕಾರ ಅಗತ್ಯ ;  ರೇವಣಸಿದ್ಧೇಶ್ವರ ಶ್ರೀಗಳು

ಎನ್.ಆರ್.ಪುರ: ಭಕ್ತರ ಸಹಾಯ ಸಹಕಾರಗಳಿದ್ದರೆ ಎಂತಹ ಕಾರ್ಯಕ್ರಮಗಳನ್ನಾದರೂ ಆಯೋಜಿಸಬಹುದೆಂಬ ಆತ್ಮ ವಿಶ್ವಾಸ ತಮ್ಮಲ್ಲಿ ಮೂಡಿದೆ ಎಂದು ಕಡೆನಂದಿಹಳ್ಳಿ ತಪೋಕ್ಷೇತ್ರದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ನುಡಿದರು.

ಶುಕ್ರವಾರ ಶ್ರೀ ಮಠದಲ್ಲಿ ಹಮ್ಮಿಕೊಂಡಿದ್ದ ಸೇವಾರ್ಥಿಗಳಿಗೆ, ಭಕ್ತರಿಗೆ ಮತ್ತು ಸಮಿತಿಯ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಶ್ರೀ ಗುರು ರೇವಣಸಿದ್ಧೇಶ್ವರ ಪುಣ್ಯಾಶ್ರಮದಲ್ಲಿ ಫೆಬ್ರುವರಿ 2ರಿಂದ 13ರ ವರೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳವರ 33ನೇ ವರ್ಧಂತಿ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯರ 36 ಅಡಿ ಎತ್ತರದ ಬೃಹತ್ ಮೂರ್ತಿ ಲೋಕಾರ್ಪಣೆ ಅಂಗವಾಗಿ ಶ್ರೀ ಜಗದ್ಗುರು ರೇಣುಕಾಚಾರ್ಯ ಪುರಾಣ ಪ್ರವಚನ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಅಲ್ಲದೇ ಶ್ರೀ ಮಠದಿಂದ ಪ್ರಥಮ ಬಾರಿಗೆ ಶ್ರೀ ರಂಭಾಪುರಿ ಜಗದ್ಗುರು ರೇವಣಸಿದ್ಧೇಶ್ವರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಈ ಎಲ್ಲ ಕಾರ್ಯಕ್ರಮಗಳನ್ನು ನೋಡಿದ ರಂಭಾಪುರಿ ಜಗದ್ಗುರುಗಳು ತಮ್ಮ ಹರುಷ ವ್ಯಕ್ತಪಡಿಸಿದ್ದಾರೆ. ಎಲ್ಲ ಕಾರ್ಯಕ್ರಮಗಳು ಯಶಸ್ವಿಯಾಗಿ ಜರುಗಿದ್ದರೆ ಅದಕ್ಕೆ ಭಕ್ತರ ಸಹಕಾರವೇ ಕಾರಣವಾಗಿದೆ. ಭಕ್ತರೇ ಶ್ರೀ ಮಠದ ಆಸ್ತಿಯಾಗಿದ್ದು ಧರ್ಮ ಕಾರ್ಯಗಳಿಗೆ ಭಕ್ತರ ಸಹಕಾರ ಅಗತ್ಯವಾಗಿದೆ ಎಂದರು. ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳುವ ರಚನಾತ್ಮಕ ಕಾರ್ಯಗಳಿಗೆ ಭಕ್ತರು ಹೀಗೆಯೇ ಸಹಕಾರ ನೀಡುವರೆಂಬ ಆತ್ಮ ವಿಶ್ವಾಸ ತಮ್ಮದಾಗಿದೆ ಎಂದರು.

ಅ.ಭಾ.ವೀ.ಮಹಾಸಭಾ ತಾಲೂಕ ಘಟಕದ ಅಧ್ಯಕ್ಷ ಎನ್.ವಿ.ಈರೇಶ್ ಹಾಗೂ ಶ್ರೀ ಗುರು ರೇವಣಸಿದ್ಧೇಶ್ವರ ಜನಕಲ್ಯಾಣ ಟ್ರಸ್ಟಿನ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಎಲ್ಲ ಸೇವಾರ್ಥಿಗಳಿಗೆ ಶ್ರೀ ಮಠದಿಂದ ಶಾಲು ಹೊದಿಸಿ ಸ್ಮರಣಿಕೆ ನೀಡಲಾಯಿತು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago