ನಿಲ್ಲಿಸುವ ಮೊದಲೇ ತೆರೆದ ಬಸ್ ಬಾಗಿಲು ; ಕೆಳಗೆ ಬಿದ್ದು ಮಹಿಳೆ ಸಾವು !

0 62

ಚಿಕ್ಕಮಗಳೂರು : ಸರ್ಕಾರಿ ಬಸ್ ಚಲಿಸುತ್ತಿದ್ದ ಸಂದರ್ಭದಲ್ಲಿ ಬಾಗಿಲು ತೆರೆದು ಆಯತಪ್ಪಿ ಕೆಳಗೆ ಬಿದ್ದು ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಹೇಮಾವತಿ(32) ಮೃತಪಟ್ಟ ಮಹಿಳೆ ಎಂದು ತಿಳಿದುಬಂದಿದೆ.

ಬುಧವಾರ ಬೇಲೂರಿನಿಂದ ಚಿಕ್ಕಮಗಳೂರಿನ ತಾಯಿ ಮನೆಗೆ ಬರುತ್ತಿದ್ದ ಸಂದರ್ಭದಲ್ಲಿ ಚಿಕ್ಕಮಗಳೂರಿನ ಕೋಟೆ ಸಮೀಪ ಬಸ್ ನಿಲ್ಲಿಸುವ ಮೊದಲೇ ಬಾಗಿಲು ತೆರೆದುಕೊಂಡಿದೆ.

ಈ ವೇಳೆ ಬಾಗಿಲ ಪಕ್ಕದಲ್ಲಿಯೇ ಇದ್ದ ಹೇಮಾವತಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ಕಳುಹಿಸುವ ವೇಳೆ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.

error: Content is protected !!