Categories: Chikkamagaluru

ಬದುಕು ಬದಲಾಗಲು ನಿರ್ಧಾರ ನಡೆ ಮುಖ್ಯ ; ರಂಭಾಪುರಿ ಶ್ರೀಗಳು

ಎನ್.ಆರ್.ಪುರ : ಮನುಷ್ಯನಲ್ಲಿ ಆತ್ಮ ಬಲ ಬೆಳೆಯಲು ಆಧ್ಯಾತ್ಮದ ಹಸಿವು ಮುಖ್ಯ. ಸನ್ಮಾರ್ಗದಲ್ಲಿ ನಡೆಯುವ ಛಲ ಇರಬೇಕು. ಬದುಕು ಬಲಗೊಳ್ಳಲು ನಮ್ಮ ನಿರ್ಧಾರ ನಡೆ ಗಟ್ಟಿಯಾಗಿರಬೇಕೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಮಂಗಳವಾರ ಶ್ರೀ ಪೀಠದಲ್ಲಿ ಹುಣ್ಣಿಮೆ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಕಾಲು ಜಾರುವುದರಿಂದ ಆಗುವ ಅನಾಹುತಕ್ಕಿಂತ ನಾಲಿಗೆ ಜಾರುವುದರಿಂದ ಆಗುವ ಅಪಾಯವೇ ಹೆಚ್ಚು. ಆಡುವ ಮಾತಿನ ಬಗ್ಗೆ ಸದಾ ಎಚ್ಚರಿಕೆಯಿಂದ ಇರಬೇಕು. ಮನುಷ್ಯನಾಗಿ ಬಾಳುವುದು ಸುಲಭ. ಆದರೆ ಮನವೀಯತೆಯಿಂದ ನಡೆಯುವುದು ತುಂಬಾ ಕಷ್ಟ. ಉತ್ತಮ ಚಿಂತನೆಗಳು ನಮಗಷ್ಟೇ ಅಲ್ಲ ಪರರ ಬದುಕಿಗೂ ಬೆಳಕಾಗಬಲ್ಲವು. ಬದುಕು ಬದಲಾಗಬೇಕಾದರೆ ಬದುಕುವ ದಾರಿ ಪರಿಶುದ್ಧವಾಗಿರಬೇಕು. ಸಂಪತ್ತು ಬಂದಾಗ ಸ್ನೇಹ ಮರೆಯಬಾರದು. ವಿದ್ಯೆ ಕಲಿತ ನಂತರ ಗುರು ಋಣ ಮರಿಬಾರದು. ಸಮಾಜದಲ್ಲಿ ಗೌರವ ಘನತೆ ದೊರಕಿದ ಸಂದರ್ಭದಲ್ಲಿ ನಡೆದು ಬಂದ ದಾರಿ ಮರೆಯಬಾರದು. ಒಗ್ಗಟ್ಟಿನಲ್ಲಿ ಬಹಳಷ್ಟು ಬಲವಿದೆ. ಆದರೆ ಆ ಒಗ್ಗಟ್ಟಿನ ರಹಸ್ಯವು ಸಂಘಟನೆಯಲ್ಲಿದೆ. ಹೆಜ್ಜೆ ತಪ್ಪಿದರೆ ಸರಿಪಡಿಸಿಕೊಳ್ಳಬಹುದು. ಆದರೆ ನಾಲಿಗೆ ತಪ್ಪಿದರೆ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಮೌಲ್ಯಾಧಾರಿತ ಬದುಕಿಗೆ ಶ್ರೀ ಜಗದ್ಗುರು ರೇಣುಕಾಚಾರ್ಯರ ವಿಚಾರ ಧಾರೆಗಳು ಸಕಲರಿಗೂ ಒಳಿತನ್ನು ಉಂಟು ಮಾಡುತ್ತವೆ ಎಂದರು.

ಪೌರ್ಣಿಮೆಯಂದು ಶ್ರೀ ರಂಭಾಪುರಿ ಜಗದ್ಗುರುಗಳ ಪಾದಪೂಜೆಯನ್ನು ಬಾಳೆಲೆ ಬಸವರಾಜ ಮತ್ತು ತಂಡದವರು ನೆರವೇರಿಸಿ ಗೌರವ ಸಮರ್ಪಿಸಿದರು.

ಬೇರುಗಂಡಿ ಬೃಹನ್ಮಠದ ರೇಣುಕ ಮಹಾಂತ ಶ್ರೀಗಳು, ಲಿಂಗದಹಳ್ಳಿ ಹಿರೇಮಠದ ವೀರಭದ್ರ ಶ್ರೀಗಳು, ಕಾರ್ಜುವಳ್ಳಿ ಹಿರೇಮಠದ ಸದಾಶಿವ ಶ್ರೀಗಳು, ಹಿರೇಸಿಂದೋಗಿ ಹಿರೇಮಠದ ಶ್ರೀಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

5 ಜನ ಜಂಗಮ ವಟುಗಳಿಗೆ ಅಯ್ಯಾಚಾರ ಶಿವದೀಕ್ಷೆ ಜರುಗಿತು. ಬೆಂಗಳೂರಿನ ಬಾಳೆಲೆ ಬಸವರಾಜ ಮತ್ತು ತಂಡದವರು ಶ್ರೀ ರಂಭಾಪುರಿ ಜಗದ್ಗುರುಗಳವರ ಪಾದಪೂಜಾ ನೆರವೇರಿಸಿ ಗೌರವ ಸಮರ್ಪಿಸಿದರು. ಸಹಸ್ರಾರು ಭಕ್ತರು ಪಾಲ್ಗೊಂಡಿದ್ದನ್ನು ಸ್ಮರಿಸಬಹುದು.

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

6 days ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

7 days ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 days ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

7 days ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago