Categories: Chikkamagaluru

ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚದಂತೆ ಕ್ರಮ ವಹಿಸಿ ; ಸಚಿವ ಕೆ.ಜೆ. ಜಾರ್ಜ್

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ಕಂಡು ಬರುವ ಪ್ರದೇಶದಲ್ಲಿ ಯಾವುದೇ ರೀತಿಯ ಜ್ವರ ಪ್ರಕರಣಗಳಿಗೆ ಕೆಎಫ್‌ಡಿ ಪರೀಕ್ಷೆ ಮಾಡಿಸಬೇಕು ಎಂದು ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಭಾನುವಾರ ಜಿಲ್ಲೆಯಲ್ಲಿ ಮಂಗನ ಕಾಯಿಲೆ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜ್ವರ ಪ್ರಕರಣಗಳಿಗೆ ಕೆಎಫ್‌ಡಿ ಪರೀಕ್ಷೆ ಮಾಡಿಸಬೇಕು. ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಹಾಗೂ ಸೋಂಕು ಹೆಚ್ಚದಂತೆ ಕ್ರಮಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ವಾಡಿಕೆಯಂತೆ ಈ ವರ್ಷವೂ ಜಿಲ್ಲೆಯಲ್ಲಿ ಪ್ರಕರಣಗಳು ವರದಿಯಾಗಿವೆ. ಕೆ.ಎಫ್.ಡಿ. ಪಾಸಿಟಿವ್ ಪ್ರಕರಣ ಪತ್ತೆಯಾದ ತಕ್ಷಣ ಆಸ್ಪತ್ರೆಗೆ ದಾಖಲಿಸಬೇಕು. ರೋಗ ಪ್ರಸರಣ ಸಾಮಾನ್ಯವಾಗಿ ಬೇಸಿಗೆಯಲ್ಲಿ ಇದ್ದು, ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಮೀಸಲಿರಿಸಬೇಕು ಹಾಗೂ ಅಗತ್ಯ ಜೌಷಧಿಗಳ ಲಭ್ಯತೆ ಇರುವಂತೆ ನೋಡಿಕೊಳ್ಳಬೇಕು. ಸೋಂಕಿತರಿಗೆ ಎ.ಬಿ.ಎ.ಆರ್.ಕೆ ಅಡಿ ರೆಫರ್ ಮಾಡಿ ಉಚಿತ ಚಿಕಿತ್ಸೆ ಕೊಡಿಸಬೇಕು. ಜನರಲ್ಲಿ ಕಾಯಿಲೆ ಕುರಿತು ಅರಿವು ಮೂಡಿಸಲು ಮಾಹಿತಿ, ಶಿಕ್ಷಣ, ಸಂವಹನ ಚಟುವಟಿಕೆಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಕಾಡಂಚಿನ ಜನರಿಗೆ ಡಿಇಪಿಎ ತೈಲವನ್ನು ವಿತರಿಸಬೇಕು. ಕಾಡಿಗೆ ತೆರಳುವ ಸಂದರ್ಭದಲ್ಲಿ ತೈಲವನ್ನು ಕೈಕಾಲುಗಳಿಗೆ ಲೇಪಿಸಿಕೊಂಡು ಹೋಗುವಂತೆ ಅವರಲ್ಲಿ ಅರಿವು ಮೂಡಿಸಿ ಎಂದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಭರತ್ ಸಭೆಗೆ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಜನವರಿ 2024 ರಿಂದ ಇಲ್ಲಿಯವರೆಗೆ ಒಟ್ಟು 387 ರಕ್ತದ ಮಾದರಿಗಳನ್ನು ಸಂಗ್ರಹಿಸಿ ಶಿವಮೊಗ್ಗ ಜಿಲ್ಲೆಯ ವಿಡಿಎಲ್ ಪ್ರಯೋಗ ಶಾಲೆಗೆ ಕಳುಹಿಸಲಾಗಿದೆ. ಅವುಗಳಲ್ಲಿ 51 ಕೆಎಫ್‌ಡಿ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 2 ಜನರು ಮೃತಪಟ್ಟಿದ್ದಾರೆ. ಕೊಪ್ಪ ತಾಲ್ಲೂಕಿನಲ್ಲಿ 322 ರಕ್ತ ಮಾದರಿಗಳ ಪೈಕಿ 38 ಪ್ರಕರಣಗಳು ಪಾಸಿಟಿವ್ ಎಂದು ವರದಿಯಾಗಿದೆ. ಎನ್.ಆರ್. ಪುರ ತಾಲ್ಲೂಕಿನಲ್ಲಿ 34 ರಕ್ತದ ಮಾದರಿಗಳಲ್ಲಿ 10 ಪಾಸಿಟಿವ್ ಪ್ರಕರಣಗಳು, ಶೃಂಗೇರಿ ತಾಲ್ಲೂಕಿನಲ್ಲಿ 22 ರಕ್ತದ ಮಾದರಿಗಳಲ್ಲಿ 1 ಪಾಸಿಟಿವ್ ಹಾಗೂ ಚಿಕ್ಕಮಗಳೂರು ತಾಲ್ಲೂಕಿನ 09 ರಕ್ತದ ಮಾದರಿಗಳಲ್ಲಿ 2 ಪಾಸಿಟಿವ್ ಎಂದು ದೃಢಪಟ್ಟಿದೆ. ಜಿಲ್ಲೆಯ ಒಟ್ಟು 74 ಟಿಕ್‌ಪೂಲ್ (ಉಣ್ಣೆ)ಗಳನ್ನು ಸಂಗ್ರಹಿಸಿ ವಿಡಿಎಲ್ ಪ್ರಯೋಗಾಲಯಕ್ಕೆ ಕಳುಹಿಸಿದ್ದು ಯಾವುದೇ ಪಾಸಿಟಿವ್ ಎಂದು ವರದಿಯಾಗಿಲ್ಲ.

ಕೊಪ್ಪ 05, ಎನ್.ಆರ್. ಪುರ 03 ಹಾಗೂ ಶೃಂಗೇರಿಯಲ್ಲಿ 01 ಮಂಗಗಳು ಮರಣ ಹೊಂದಿದ್ದು ಜಿಲ್ಲೆಯಲ್ಲಿ ಒಟ್ಟು 09 ಮಂಗಗಳು ಮರಣ ಹೊಂದಿವೆ. ಇವುಗಳ ಪೈಕಿ ಯಾವುದೇ ಕೆಎಫ್‌ಡಿ ಪಾಸಿಟಿವ್ ಪ್ರಕರಣಗಳು ವರದಿಯಾಗಿರುವುದಿಲ್ಲ.

ಜಿಲ್ಲೆಯಲ್ಲಿ ವರದಿಯಾದ ಒಟ್ಟು 51 ಕೆಎಫ್‌ಡಿ ಪ್ರಕರಣಗಳಲ್ಲಿ 36 ಪ್ರಕರಣಗಳು ಈಗಾಗಲೇ ಡಿಸ್ಚಾರ್ಜ್ ಆಗಿದ್ದು, ಉಳಿದ 13 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಕೊಪ್ಪ, ಎನ್.ಆರ್.ಪುರ, ಮೂಡಿಗೆರೆ, ಶೃಂಗೇರಿ ಹಾಗೂ ಚಿಕ್ಕಮಗಳೂರು ತಾಲ್ಲೂಕುಗಳಲ್ಲಿ ಟಿಕ್‌ಗಳ ಸಂಗ್ರಹಣೆ, ಜ್ವರ ಸಮೀಕ್ಷೆ ಹಾಗೂ ಮಂಗಗಳ ಸಾವಿನ ಸಮೀಕ್ಷೆಗಳನ್ನು ಸಕ್ರಿಯವಾಗಿ ಕೈಗೊಳ್ಳಲಾಗಿದೆ. ಅರಣ್ಯ ಹಾಗೂ ಎಸ್ಟೇಟ್‌ಗಳಲ್ಲಿನ ಸಾರ್ವಜನಿಕರಿಗೆ ಡಿಇಪಿಎ ತೈಲ ವಿತರಣೆ ಮಾಡಲಾಗುತ್ತಿದೆ. ಕಾಡಿನಲ್ಲಿ ವಾಸಿಸುವ ಹಾಗೂ ಕಾಡಿಗೆ ಹೋಗಿ ಬರುವ ಸಾರ್ವಜನಿಕರಿಗೆ ಅವರು ಧರಿಸುವ ಬಟ್ಟೆಯ ಬಗ್ಗೆ ಕಾಡಿಗೆ ಹೋಗುವ ಮೊದಲು ಡಿಇಪಿಎ ತೈಲವನ್ನು ಹಚ್ಚಿಕೊಳ್ಳುವಂತೆ, ಕಾಡಿನಿಂದ ಬಂದ ನಂತರ ಧರಿಸಿದ ಬಟ್ಟೆಯನ್ನು ಬಿಸಿ ನೀರಿನಲ್ಲಿ ಅದ್ದಿ ಶುಚಿಗೊಳಿಸುವಂತೆ ಹಾಗೂ ಕಾಡಿನಿಂದ ಬಂದ ತಕ್ಷಣ ಬಿಸಿ ನೀರಿನ ಸ್ನಾನ ಮಾಡಿ ಮನೆಯೊಳಗೆ ಹೋಗುವಂತೆ ಅರಿವು ಮೂಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಜ್ವರ ಪರೀಕ್ಷೆಗೆ ಬೇರೆ ಜಿಲ್ಲೆಗೆ ರಕ್ತದ ಮಾದರಿಯನ್ನು ಕಳುಹಿಸಿ ಅಲ್ಲಿಂದ ವರದಿ ಬರಲು ಸಮಯ ತೆಗೆದುಕೊಳ್ಳುವ ಕಾರಣ ಜಿಲ್ಲೆಯಲ್ಲಿಯೇ ಪ್ರಯೋಗಾಲಯವನ್ನು ತೆರೆಯುವಂತೆ ಸಚಿವರು ಸೂಚಿಸಿದರು.

ಸಭೆಯಲ್ಲಿ ಶಾಸಕರುಗಳಾದ ಹೆಚ್.ಡಿ. ತಮ್ಮಯ್ಯ, ನಯನಾ ಮೋಟಮ್ಮ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ, ಸಚಿವರ ಆಪ್ತ ಕಾರ್ಯದರ್ಶಿ ಸತೀಶ್ ಕುಮಾರ್, ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್., ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ ಬಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್ ಬಾಬು, ಡಾ. ಮಂಜುನಾಥ್, ಎಲ್ಲಾ ತಾಲ್ಲೂಕುಗಳ ವೈದ್ಯಾಧಿಕಾರಿಗಳು ಹಾಜರಿದ್ದರು.


ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು : ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಹಾಗೂ ಅನೈರ್ಮಲ್ಯಕರ ವೃತ್ತಿಗಳಲ್ಲಿರುವ ಪೋಷಕರ ಪ್ರತಿಭಾವಂತ ಗಂಡು ಮಕ್ಕಳನ್ನು 2024-25ರ 8ನೇ ತರಗತಿಗೆ ಸೇರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 18 ಕೊನೆಯ ದಿನವಾಗಿರುತ್ತದೆ. ಪ್ರವೇಶ ಪರೀಕ್ಷೆಯನ್ನು ಏಪ್ರಿಲ್ 11 ರಂದು ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಗ್ರೆಡ್-1&2 ಇವರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ರಾಸುಗಳ ಚಿಕಿತ್ಸಾ ಶಿಬಿರ


ಚಿಕ್ಕಮಗಳೂರು : ತೋಟಗಾರಿಕೆ ಇಲಾಖೆ ಮೂಡಿಗೆರೆ ಹಾಗೂ ಪಶುಪಾಲನ ಮತ್ತು ಪಶುವೈದ್ಯ ಸೇವಾ ಇಲಾಖೆ, ಪಿಳ್ಳೇನಹಳ್ಳಿ ಕಡೂರು ಇವರ ವತಿಯಿಂದ ಮಾರ್ಚ್ 05 ಬೆಳಿಗ್ಗೆ 7.30 ಗಂಟೆಗೆ ಪಿಳ್ಳೇನಹಳ್ಳಿಯಲ್ಲಿ ಮಿಶ್ರತಳಿ ಹೆಣ್ಣು ಕರುಗಳ ಪ್ರದರ್ಶನ ಮತ್ತು ಉಚಿತ ಬರಡು ರಾಸುಗಳ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ.


ಶಿಬಿರದಲ್ಲಿ ಕರುಗಳಿಗೆ ಜಂತುನಾಶಕ ಔಷಧಿ, ಹೊರ ಪರೋಪಜೀವಿ ನಾಶಕ ಔಷಧಿ, ಬಂಜೆ ಜಾನುವಾರುಗಳ ಚಿಕಿತ್ಸೆ, ರೋಗಗ್ರಸ್ಥ ಜಾನುವಾರುಗಳಿಗೆ ಚಿಕಿತ್ಸೆ ಮತ್ತು ಮಾಹಿತಿ ನೀಡಲಾಗುವುದು.


ಶಿಬಿರದಲ್ಲಿ ಗ್ರಾಮಸ್ಥರು ತಮ್ಮ ರಾಸುಗಳು ಮತ್ತು ಕರುಗಳೊಂದಿಗೆ ಆಗಮಿಸಿ ಶಿಬಿರವನ್ನು ಯಶಸ್ವಿಗೊಳಿಸಬೇಕೆಂದು ಸಹಾಯಕ ನಿರ್ದೇಶಕರು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಕಡೂರು ಹಾಗೂ ಗ್ರಾಮೀಣ ತೋಟಗಾರಿಕೆ ಶಿಬಿರದ ಸಂಯೋಜಕರು ಮೂಡಿಗೆರೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಮೆಸ್ಕಾಂ ಜನ ಸಂಪರ್ಕ


ಚಿಕ್ಕಮಗಳೂರು: ಮೆಸ್ಕಾಂ ಕಳಸ ಉಪವಿಭಾಗ ಕಛೇರಿಯಲ್ಲಿ ಮಾರ್ಚ್ 06 ರಂದು ಬೆಳಿಗ್ಗೆ 11.00 ಗಂಟೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂನ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Malnad Times

Recent Posts

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

15 hours ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

16 hours ago

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರಿಂದ ಭರ್ಜರಿ ರೋಡ್ ಷೋ

ರಿಪ್ಪನ್‌ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…

17 hours ago

ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಹಸ್ತಕ್ಷೇಪವಿಲ್ಲ ; ಸುಧೀರ್‌ಕುಮಾರ್ ಮುರೊಳ್ಳಿ ಸ್ಪಷ್ಟನೆ

ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…

19 hours ago

ಕಾಡಾನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ ಬಿವೈಆರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…

21 hours ago

Shivamogga | ನಗರದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ‘ಮ್ಯಾರಾಥಾನ್’

ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…

22 hours ago