ಮಳೆಗಾಲದಲ್ಲಿ ಉಂಟಾಗಬಹುದಾದ ವಿಪತ್ತುಗಳನ್ನು ಎದುರಿಸಲು ಸದಾ ಸನ್ನದ್ದರಗಿರಲು ಅಧಿಕಾರಿಗಳಿಗೆ ಸಚಿವ ಕೆ.ಜೆ ಜಾರ್ಜ್ ಸೂಚನೆ

0 39

ಚಿಕ್ಕಮಗಳೂರು : ಮಳೆಗಾಲ ಆರಂಭವಾಗಿದ್ದು ಈ ಹಿನ್ನೆಲೆಯಲ್ಲಿ ಉಂಟಾಗಬಹುದಾದ ವಿಪತ್ತುಗಳನ್ನು ಎದುರಿಸಲು ಸದಾ ಸನ್ನದ್ದರಾಗಿರುವಂತೆ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು.


ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಳೆ ಹಾನಿ ನಿರ್ವಹಣಾ ಸಭೆಯ ಮಾತನಾಡಿದ ಅವರು, ಮಳೆಗಾಲ ಮುಗಿಯುವವರೆಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಜಿಲ್ಲಾದ್ಯಾಂತ ಉಂಟಾಗಬಹುದಾದಂತ ತುರ್ತು ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರಬೇಕು.
ಹಿಂದಿನ ವರ್ಷಗಳಲ್ಲಿ ಮಳೆಯಿಂದ ಆಗಿರುವ ಅನಾಹುತಗಳ ಸ್ಥಳಗಳಲ್ಲಿ ಈಗಿನಿಂದಲೇ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.


ಮಳೆಯಿಂದಾಗಿ ನಷ್ಟ ಅನುಭವಿಸಿದಲ್ಲಿ ಅಥವಾ ವಿಪತ್ತುಗಳು ಸಂಬಂಧಿಸಿದಲ್ಲಿ ತುರ್ತು ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ತಿಳಿಸಿದರು. ಎಲ್ಲಾ ಇಲಾಖೆ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಕಟ್ಟುನಿಟ್ಟಾಗಿ ಸ್ಪಂದಿಸಬೇಕು ಎಂದು ಸೂಚಿಸಿದರು.


ಜಿಲ್ಲಾಧಿಕಾರಿಗಳ ಹಾಗೂ ಅಪರ ಜಿಲ್ಲಾಧಿಕಾರಿ ಅನುಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್, ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಸತೀಶ್ ಕುಮಾರ್, ಉಪವಿಭಾಗಾಧಿಕಾರಿ ರಾಜೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸೋಮಶೇಖರ್ ವಿಪತ್ತು ನಿರ್ವಹಣಾ ವಿಭಾಗದ ಜಿಲ್ಲಾ ಸಂಯೋಜಕ ದೀಕ್ಷಿತ್ ಸೇರಿದಂತೆ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Leave A Reply

Your email address will not be published.

error: Content is protected !!