ಮಸ್ಟರಿಂಗ್ ಕೇಂದ್ರಕ್ಕೆ ಚುನಾವಣಾಧಿಕಾರಿ ಕೆ.ಎನ್ ರಮೇಶ್ ಭೇಟಿ ನೀಡಿ ಮತದಾನ ಸಿದ್ಧತೆಯ ಪರಿಶೀಲನೆ

0 39

ಚಿಕ್ಕಮಗಳೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಮೇ. 10 ರಂದು ನಡೆಯಲಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ತಿಳಿಸಿದರು.


ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪತ್ರಕರ್ತರಿಗೆ ಮಾಹಿತಿ ನೀಡಿ ಮಾತನಾಡಿ, ಜಿಲ್ಲೆಯಲ್ಲಿ 9,73,000. ಮತದಾರರಿದ್ದಾರೆ, 1,224 ಮತಗಟ್ಟೆಗಳಿದ್ದು, ಎಲ್ಲಾ ಮತಗಟ್ಟೆಗಳಲ್ಲೂ ಮತದಾನಕ್ಕೆ ಸಿದ್ಧತೆ ಮಾಡಲಾಗಿದೆ. 1,700 ಕ್ಕಿಂತ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು 5,756 ಸಿಬ್ಬಂದಿಗಳು ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸಲಿದ್ದು, ಮತಗಟ್ಟೆಗಳಿಗೆ ಇಂದು ಮತದಾನ ಸಾಮಗ್ರಿಗಳನ್ನು ಕಳುಹಿಸಲಾಗುತ್ತಿದ್ದು, ಮತಗಟ್ಟೆಗಳಲ್ಲಿ ಸಿಬ್ಬಂದಿಗಳಿಗೆ ತೊಂದರೆಯಾಗದಂತೆ ಎಲ್ಲಾ ಮೂಲಭೂತ ಸೌಲಭ್ಯ ಕಲ್ಪಿಸಲಾಗಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳ ನೇತೃತ್ವದಲ್ಲಿ ಸಿಬ್ಬಂದಿಗಳಿಗೆ ಊಟ ತಿಂಡಿ ವ್ಯವಸ್ಥೆ ಮಾಡಲಾಗಿದೆ. ಸಿಬ್ಬಂದಿಗಳು ಮತಗಟ್ಟೆಗೆ ಹೋದ ಕೂಡಲೇ ಸ್ಥಳೀಯ ಅಧಿಕಾರಿಗಳು ಅವರನ್ನು ಸ್ವಾಗತಿಸುವರು. ಸಣ್ಣ ಪುಟ್ಟ ಸಮಸ್ಯೆಗಳಿದ್ದರೆ ಅಧಿಕಾರಿಗಳಿಗೆ ತಿಳಿಸಿದರೆ ಸಮಸ್ಯೆ ಬಗೆಹರಿಸುವರು ಎಂದರು.


ಅಗತ್ಯ ಬಂದೋಬಸ್ತ್‌ಗಾಗಿ 17 ಪ್ಯಾರ ಮಿಲಿಟರಿ ಪಡೆಗಳು ಆಗಮಿಸಿವೆ ಅಲ್ಲದೆ 1,700 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ ಎಂದು ಹೇಳಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಹಾಗೂ ಅಧಿಕಾರಿಗಳು ಸ್ಥಳದಲ್ಲಿದರು.

Leave A Reply

Your email address will not be published.

error: Content is protected !!