ಮಾದರಿ ನೀತಿ ಸಂಹಿತೆ ಕಡ್ಡಾಯವಾಗಿ ಪಾಲಿಸಬೇಕು ; ಡಿಸಿ ಮೀನಾ ನಾಗರಾಜ್

0 213

ಚಿಕ್ಕಮಗಳೂರು: 2024ರ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಮ ಸಮ್ಮತ ಮತ್ತು ಶಾಂತಿ ಸುವ್ಯವಸ್ಥಿತೆಯೊಂದಿಗೆ ಯಶಸ್ವಿಯಾಗಿ ನಡೆಯಲು ಮಾದರಿ ನೀತಿ ಸಂಹಿತೆ ಅನುಷ್ಠಾನಾಧಿಕಾರಿಗಳು ಚುನಾವಣಾ ಆಯೋಗ ನೀಡಿರುವ ಸೂಚನೆಗಳನ್ನು ಪಾಲಿಸುವುದರ ಮೂಲಕ ತಮ್ಮ ಕರ್ತವ್ಯಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಅವರು ಹೇಳಿದ್ದಾರೆ.


ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಇಂದು ನಡೆದ ಮಾದರಿ ನೀತಿ ಸಂಹಿತೆ ಸಂಬಂಧಿಸಿದ ಅನುಷ್ಠಾನಾಧಿಕಾರಿಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ ಚೆಕ್ ಪೊಸ್ಟ್‌ಗಳನ್ನು ತೆರೆದು ಸಿಸಿ ಕ್ಯಾಮೆರಾ, ಅಗತ್ಯ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದ ಅವರು, ಚೆಕ್ ಪೊಸ್ಟ್‌ಗಳಲ್ಲಿ ತೀವ್ರ ತಪಾಸಣೆ ಮಾಡಲಾಗುತ್ತಿದ್ದು, ಇಲ್ಲಿ ನಡೆಯುವ ಎಲ್ಲಾ ಮಾಹಿತಿಗಳನ್ನು ಸಂಗ್ರಹಿಸಲು ನೋಡಲ್ ಅಧಿಕಾರಿಗಳ ಜಾಗೃತಿ ತಂಡ ಕೂಡ ಕೆಲಸ ನಿರ್ವಹಿಸಲಿದ್ದು, ಸರಕು ವಾಹನಗಳು ಸೇರಿದಂತೆ ಜಿಲ್ಲೆಯಲ್ಲಿ ಅಬಕಾರಿ ತನಿಖಾ ತಂಡಗಳು ಕೂಡ ರಚಿಸಲಾಗಿದೆ ಎಂದರು.


ಆದಾಯ ತೆರಿಗೆ, ಐ.ಟಿ. ಇಲಾಖೆಗಳು ತಮ್ಮ ತಮ್ಮ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದು, ಎಲ್ಲ ಬ್ಯಾಂಕ್ ವಹಿವಾಟು ನಡೆಯುವ ಬ್ಯಾಂಕ್ ಖಾತೆಗಳನ್ನು ನಿರ್ವಹಿಸುವ ಮತ್ತು ಹೆಚ್ಚು ಹಣ ವಹಿವಾಟು ನಡೆಸುವ ಅಕೌಂಟ್‌ಗಳ ಬಗ್ಗೆ ನಿಗಾ ಇಡಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಮಾದರಿ ಸಂಹಿತೆ ಅಧಿಕಾರಿಗಳ ತಂಡ ಇದನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದ ಅವರು, ಭದ್ರಾ, ವೈಲ್ಡ್ ಲೈಫ್, ಆನೆ ಕಾರಿಡಾರ್ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಮತಗಟ್ಟೆಗಳಲ್ಲಿ ವಾಸಿಸುವ ಹಾಗೂ ಮತದಾನದ ದಿನದಂತೆ ಯಾವುದೇ ಕಾಡು ಪ್ರಾಣಿಗಳಿಂದ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ಅಲ್ಲಿ ವಾಸಿಸುವ ಪ್ರದೇಶದ ಜನರಿಗೆ ರಕ್ಷಣೆ ನೀಡುವುದು ಅರಣ್ಯ ಇಲಾಖೆಯ ಅಧಿಕಾರಿಗಳು ಮುಂದಾಗಬೇಕು. ಪ್ರಾಣಿಗಳಿಂದ ಹೆಚ್ಚು ಅಪಾಯವಿರುವ ಸ್ಥಳಗಳನ್ನು ಗುರುತಿಸಿ ಈಗಿಂದಲೇ ಅದರ ನಿವಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.


ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಂ ಅಮ್ಟೆ ಸೇರಿದಂತೆ ಅನುಷ್ಠಾನಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!