Categories: Chikkamagaluru

ಮೋದಿ ಮತ್ತೆ ಪ್ರಧಾನಿ ಆಗುವುದನ್ನು ಯಾರಿಂದಲೂ ತಪ್ಪಿಸಲು ಆಗುವುದಿಲ್ಲ

ಚಿಕ್ಕಮಗಳೂರು: ನರೇಂದ್ರ ಮೋದಿ (Narendra Modi) ಮತ್ತೆ ಪ್ರಧಾನಿ ಆಗುವುದನ್ನು ಯಾರಿಂದಲೂ ತಪ್ಪಿಸಲು ಆಗುವುದಿಲ್ಲ. ಮೋದಿ ಅವರಲ್ಲಿ ಯಾರೂ ಯಾವ ತಪ್ಪನ್ನೂ ಕಂಡು ಹಿಡಿಯಲು ಸಾಧ್ಯವಾಗಿಲ್ಲ. ಅವರ ಮುಂದೆ ವಿರೋಧ ಪಕ್ಷವೇ ಇಲ್ಲ. ಅದು ನಮ್ಮ ಪ್ರಯತ್ನವಲ್ಲ ದೈವ ಸೃಷ್ಠಿ ಎಂದು ಆಧ್ಯಾತ್ಮ ಗುರು ದ್ವಾರಕಾನಾಥ್ ಹೇಳಿದ್ದಾರೆ.

ಚಿಕ್ಕಮಗಳೂರು (Chikkamagaluru) ತಾಲೂಕಿನ ದತ್ತಪೀಠಕ್ಕೆ ಆಗಮಿಸಿದ್ದ ವೇಳೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೋದಿ ಅವರು ಮತ್ತೆ ಪ್ರಧಾನಿ ಆಗುವುದರಲ್ಲಿ ಸಂದೇಹ ಬೇಡ. ಅವರು ಯಾವ ಪುಣ್ಯವನ್ನು ಸಂಪಾದನೆ ಮಾಡಿದ್ದಾರೋ ಗೊತ್ತಿಲ್ಲ. ಅವರಿಗೆ ಇನ್ನೂ ಎರಡು ವರ್ಷ ರಾಷ್ಟ್ರವನ್ನಾಳುವ ಶಕ್ತಿ ಇದೆ. 75 ವರ್ಷದ ವರೆಗೆ ಅಧಿಕಾರ ಎಂದು ಅವರೇ ಹೇಳಿದ್ದಾರೆ. ಅದನ್ನು ಅವರು ಉಲ್ಲಂಘನೆ ಮಾಡುವುದಿಲ್ಲ. ಅದು ಅವರ ಸ್ವಭಾವ. ಮುಂದೆ ಅವರು ರಾಷ್ಟ್ರಪತಿ ಆದರೂ ಆಗಬಹುದು. ದೇಶವನ್ನು ಚೆನ್ನಾಗಿ ಕಟ್ಟುವವರು ಬೇಕು. ಧರ್ಮವನ್ನು ದಡ ತಲುಪಿಸುವವರು ಬೇಕು ಎಂದರು.

ಇನ್ನೂ ವಿರೋಧ ಪಕ್ಷಕ್ಕೆ ಬಲ ಬಂದಿಲ್ಲ. 2028 ರ ಹೊತ್ತಿಗೆ ವಿರೋಧ ಪಕ್ಷಗಳಿಗೂ ಬಲ ಬರಲಿದೆ. ಈಗಲೂ ಅವರೇನು ಅಳಿಸಿ ಹೋಗುವುದಿಲ್ಲ. ಆದರೆ ಮೋದಿ ಅವರು ಪ್ರಧಾನಿ ಆಗುವುದನ್ನು ತಡೆಯಲಾಗುವುದಿಲ್ಲ ಎಂದರು.

ಈ ತಕ್ಷಣಕ್ಕೆ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಬದಲಾಗುತ್ತಾರೆ ಎನ್ನುವುದು ಸಲ್ಲದ ಮಾತು. ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಆಗುವುದಿಲ್ಲ ಎಂದರು. ನನ್ನ ಶಿಷ್ಯ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರ ಎನ್ನುವ ಪ್ರಶ್ನೆ ಇದೆ. ಆದರೆ ಅವರು ಆ ವ್ಯಕ್ತಿತ್ವವನ್ನು ಮೊದಲು ಚೆನ್ನಾಗಿ ಬೆಳೆಸಿಕೊಂಡು ಮುಖ್ಯಮಂತ್ರಿ ಆಗುವವರಿಗೆ ಏನೇನು ಗುಣಗಳಿರಬೇಕು ಅದಕ್ಕೆ ಬೆಲೆ ಕೊಟ್ಟು ಸುತ್ತ ಮುತ್ತ ಶುದ್ಧವಾದವರನ್ನ ಇಟ್ಟುಕೊಂಡು ಎಲ್ಲಾ ಶಾಸಕರ ಬೆಂಬಲ ಪಡೆಯುವ ವಿಶ್ವಾಸದಿಂದ ಕೆಲಸ ಮಾಡಬೇಕು. ಮುಂದೆ ಒಂದು ದಿನ ರಾಜ್ಯವನ್ನಾಳುವ ಶಕ್ತಿ, ಸಾಮರ್ಥ್ಯ ಇದೆ ಎಂದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

19 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

23 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

23 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago