Categories: Chikkamagaluru

ರಾಜ್ಯ ಸರ್ಕಾರ ರೈತರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ; ಆರಗ ಜ್ಞಾನೇಂದ್ರ

ಚಿಕ್ಕಮಗಳೂರು: ತಾಲ್ಲೂಕಿನ ಬಹುತೇಕ ಹೋಬಳಿಗಳು ಬರಪೀಡಿತ ಪ್ರದೇಶಗಳಾಗಿದ್ದು ಮಳೆಯ ಕೊರತೆಯಿಂದ ಕೆರೆಗಳು ಬತ್ತಿ ಹೋಗಿರುವ ಪರಿಣಾಮ ಸೂಕ್ತ ಬೆಳೆ ದೊರೆಯದೇ ರೈತರು ಕಂಗಾಲಾಗಿ ಆತ್ಮಹತ್ಯೆ ಶರಣಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅಸಮಾಧಾನ ವ್ಯಕ್ತಪಡಿಸಿದರು.

ತಾಲ್ಲೂಕಿನ ಲಕ್ಯಾ ಹಾಗೂ ಸಖರಾಯಪಟ್ಟಣ ವ್ಯಾಪ್ತಿಯ ಎಸ್.ಬಿದರೆ, ಭಕ್ತರಹಳ್ಳಿ ಹಾಗೂ ವಡ್ಡರಹಳ್ಳಿ ಗ್ರಾಮಗಳಿಗೆ ಬಿಜೆಪಿ ತಂಡದೊಂದಿಗೆ ಪ್ರವಾಸ ಕೈಗೊಂಡಿರುವ ಮಾಜಿ ಸಚಿವರು ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಈ ಭಾಗವು ಬರಪೀಡಿತ ಪ್ರದೇಶವಾಗಿದ್ದರೂ ರಾಜ್ಯ ಸರ್ಕಾರ ಸೂಕ್ತ ಪರಿಹಾರ ಒದಗಿಸದೇ ರೈತರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು.

ಸಮಯಕ್ಕೆ ಸರಿಯಾಗಿ ಮಳೆ ಬಾರದ ಹಿನ್ನೆಲೆಯಲ್ಲಿ ಹಲವಾರು ಗ್ರಾಮಗಳಲ್ಲಿ ಕೆರೆಗಳು ಬತ್ತಿ ಹೋಗಿದೆ. ಕೆಲ ವು ರೈತಾಪಿ ವರ್ಗವು ಬೋರ್‌ವೇಲ್ ವ್ಯವಸ್ಥೆಯಿರುವ ಕಾರಣ ತಕ್ಕಮಟ್ಟಿನ ಬೆಳೆಗಳು ಉಳಿದುಕೊಂಡಿದೆ. ಇನ್ನುಳಿದ ರೈತರ ಪಾಡು ಚಿಂತಾಜನಕವಾಗಿದೆ. ಬೆಳೆಗೆ ತಕ್ಕಪ್ರತಿಫಲ ದೊರೆಯತ್ತಿಲ್ಲ. ಇನ್ನೊಂದೆಡೆ ರಾಜ್ಯಸರ್ಕಾರ ಪರಿಹಾರ ನೀಡುತ್ತಿಲ್ಲ. ಇವುಗಳ ನಡುವೆ ಸಿಲುಕಿ ಸಮಸ್ಯೆ ಅನುಭವಿಸುವಂತಾಗಿದೆ ಎಂದರು.

ಈ ಭಾಗದ ಪ್ರಮುಖ ಬೆಳೆಗಳಾದ ರಾಗಿ, ಜೋಳ ಹಾಗೂ ತರಕಾರಿಗಳು ಬಹುತೇಕ ನಾಶವಾಗಿವೆ. ಅತಿ ಮುಖ್ಯವಾದ ಭತ್ತವು ಕೂಡಾ ಸಂಪೂರ್ಣ ನೆಲಕಚ್ಚಿದ ಪರಿಣಾಮ ಆಹಾರ ಪದಾರ್ಥಗಳಿಗೆ ಅಭಾವ ಉಂಟಾಗಿದೆ. ಇದರಿಂದ ರೈತರ ಪಾಡು ಮುಂದೆನೆಂಬುದು ತಿಳಿಯದಾಗಿದ್ದು ಈ ಬಗ್ಗೆ ರಾಜ್ಯ ಸರ್ಕಾರ ಕಣ್ಣೆತ್ತಿ ನೋಡದೇ ಜನ ವಿರೋಧಿ ಆಡಳಿತ ನೀಡುತ್ತಿದೆ ಎಂದು ದೂರಿದರು.

ರಾಜ್ಯದ ಹಲವಾರು ಜಿಲ್ಲೆಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದ್ದರೂ ಯಾವುದೇ ಪರಿಹಾರ ನೀಡ ದಿರುವ ಪರಿಣಾಮ ರಾಜ್ಯದ ಜನತೆ ಕೆಲವು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಹತಾಸೆ ವ್ಯಕ್ತಪಡಿಸು ತ್ತಿದೆ. ಆ ಹಿನ್ನೆಲೆಯಲ್ಲಿ ಬಿಜೆಪಿ ತಂಡವು ರಾಜ್ಯಾದ್ಯಂತ ಸಂಚರಿಸಿ ಸಮೀಕ್ಷೆ ನಡೆಸುವ ಮೂಲಕ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತಿದೆ ಎಂದು ಹೇಳಿದರು.

ಗ್ರಾಮೀಣ ಪ್ರದೇಶದ ರೈತಾಪಿ ವರ್ಗಕ್ಕೆ ಬಹಳಷ್ಟು ಸಮಸ್ಯೆ ಎದುರಾಗಿದ್ದು ಕೂಡಲೇ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ತ್ವರಿತವಾಗಿ ಗಮನಹರಿಸಬೇಕಿದೆ. ಆ ನಿಟ್ಟಿನಲ್ಲಿ ಮುಂದಿನ ಅಧಿವೇಶನದಲ್ಲಿ ರೈತರ ಸಂಕಷ್ಟಗಳಿಗೆ ಸ್ಪಂದಿಸುವುದು ಹಾಗೂ ಜನತೆಯ ಅಸಹಾಯಕತೆ ಧ್ವನಿಯಾಗಿ ನಿಲ್ಲುವ ಮೂಲಕ ರಾಜ್ಯಸರ್ಕಾರದ ಕಣ್ತೆರೆಸಿ ರೈತರ ಸೌಲಭ್ಯಗಳಿಗೆ ಒತ್ತಾಯಿಸಲಾಗುವುದು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಸಿ.ಕಲ್ಮರುಡಪ್ಪ ಮಾತನಾಡಿ, ಹಾನಿಗೊಂಡಿರುವ ಬೆಳೆಗಳನ್ನು ಪ್ರತ್ಯಕ್ಷವಾಗಿ ಭೇಟಿ ನೀಡಿ ವರದಿ ಸಲ್ಲಿಸುವ ಆಶಯದಿಂದ ಬಿಜೆಪಿ ತಂಡದೊಂದಿಗೆ ಮಾಜಿ ಸಚಿವರು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಬರಪೀಡಿತ ಪ್ರದೇಶಗಳ ಪರಿಶೀಲನೆ ನಡೆಸುವ ಮೂಲಕ ವರದಿ ಸಲ್ಲಿಸಲು ಮುಂದಾಗಿದೆ ಎಂದರು.

ಚಿಕ್ಕಮಗಳೂರು, ಕಡೂರು ಹಾಗೂ ಅಜ್ಜಂಪುರ ತಾಲ್ಲೂಕು ವ್ಯಾಪ್ತಿಯ ಬರಪೀಡಿತ ಗ್ರಾಮಗಳಿಗೆ ಮಾಝಿ ಸಚಿವರು ಭೇಟಿ ನೀಡಿ ಪರಿಶೀಲಿಸಿದ್ದು ಈ ಬಗ್ಗೆ ಮುಂಬರುವ ಅಧಿವೇಶನದಲ್ಲಿ ಚರ್ಚಿಸಿ ಸಮರ್ಪಕವಾಗಿ ನ್ಯಾಯ ಒದಗಿಸಲಿದ್ದಾರೆ ಎಂದರು.

ಇದೇ ವೇಳೆ ಬಹುತೇಕ ಗ್ರಾಮಗಳಿಗೆ ಭೇಟಿ ನೀಡಿದ ಮಾಜಿ ಸಚಿವರಿಗೆ ಗ್ರಾಮಸ್ಥರು ಜಿಲ್ಲೆಯ ಎಲ್ಲಾ ತಾಲ್ಲೂ ಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ. ಚಿಕ್ಕಮಗಳೂರು ತಾಲ್ಲೂಕು ಘೋಷಿಸಿಲ್ಲ. ಆ ನಿಟ್ಟಿನಲ್ಲಿ ಸರ್ಕಾರ ಹೋಬಳಿ ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸಿ ಹೋಬಳಿಯನ್ನು ಕೂಡಾ ಬರಪ್ರದೇಶವೆಂದು ಘೋಷಿಸಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿದರು.

ಜಿ.ಪಂ. ಮಾಜಿ ಸದಸ್ಯ ರವೀಂದ್ರ ಬೆಳವಾಡಿ ಮಾತನಾಡಿ ಕೆರೆಕಟ್ಟೆಗಳು ಹಾಗೂ ಜಾನುವಾರುಗಳಿಗೆ ಕುಡಿ ಯುವ ನೀರಿಲ್ಲದೇ ಬಹಳಷ್ಟು ಸಮಸ್ಯೆಯಾಗಿದೆ. ಕೆಲವರು ಸೂಕ್ತ ಬೆಳೆ ಬಾರದಿರುವ ಹಿನ್ನೆಲೆಯಲ್ಲಿ ಆತ್ಮಹತ್ಯೆಗೂ ಶರಣಾಗಲಾಗಿದೆ. ಆ ನಿಟ್ಟಿನಲ್ಲಿ ಲಕ್ಯಾ ಹೋಬಳಿಯು ಬರಪೀಡಿತ ಹೋಬಳಿಯೆಂದು ಪರಿಗಣಿಸಬೇಕು. ಇಲ್ಲಿನ ರೈತರಿಗೆ ಪರಿಹಾರ ಒದಗಿಸಿ ಬದುಕ ಹಸನಾಗಿಸಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ವಡ್ಡರಹಳ್ಳಿ ಗ್ರಾಮದ ರೈತರ ವೆಂಕಟಬೋವಿ ಎಂಬುವವರು ಸಮರ್ಪಕ ಬೆಳೆಬಾರದಿರುವ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು ಮಾಜಿ ಸಚಿವರು ಹಾಗೂ ಬಿಜೆಪಿ ತಂಡ ಭೇಟಿ ನೀಡಿ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಡಿ.ಎನ್.ಜೀವರಾಜ್, ವಿಧಾನ ಪರಿಷತ್ ಸದಸ್ಯ ಡಿ.ಹೆಚ್.ಅರುಣ್ ಕುಮಾರ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕೆ.ಆರ್.ಆನಂದಪ್ಪ, ಮಂಡಲ ಅಧ್ಯಕ್ಷ ಈಶ್ವರಹಳ್ಳಿ ಮಹೇಶ್, ಉಪಾ ಧ್ಯಕ್ಷ ಡಾ.ನರೇಂದ್ರ, ಮುಖಂಡರುಗಳಾದ ದೀಪಕ್‌ದೊಡ್ಡಯ್ಯ, ದಿನೇಶ್ ಪಾದಮನೆ, ಗ್ರಾಮಸ್ಥರಾದ ಸುರೇಶ್, ಚನ್ನು ಮತ್ತಿತರರು ಹಾಜರಿದ್ದರು.

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

6 days ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

7 days ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 days ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

7 days ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago