Categories: Chikkamagaluru

ಸಿಎಂ ಸಿದ್ದರಾಮಯ್ಯ ತಿಥಿ ಕಾರ್ಡ್ ಪೋಸ್ಚ್ ; BJP ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಿಥಿ ಕಾರ್ಡ್ ರಚಿಸಿ ಹಿಂದೂ ಸಾಮ್ರಾಜ್ಯ ಮೂಡಿಗೆರೆ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡ ಪ್ರಕರಣ ಸಂಬಂಧ ಬಿಜೆಪಿ ಕಾರ್ಯಕರ್ತನ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ.

ಸಿದ್ದರಾಮಯ್ಯ ಅವರ ಅಭಿಮಾನಿಗಳು ನೀಡಿದ ದೂರಿನ ಅನ್ವಯ ಪ್ರಜ್ವಲ್ ವಿರುದ್ಧ ಚಿಕ್ಕಮಗಳೂರು ಸೆನ್ ಪೊಲೀಸ್ ಠಾಣೆ ಹಾಗೂ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿದ್ದರಾಮಯ್ಯ ಅವರ ತಿಥಿ ಕಾರ್ಡ್ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಪೋಸ್ಟ್ ರಚಿಸಿ ಫೇಸ್​ಬುಕ್ ಮತ್ತು ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಮೂಡಿಗೆರೆ ಪಟ್ಟಣದ ಪ್ರಜ್ವಲ್ ಹಂಚಿಕೊಂಡಿದ್ದನು. ಇದನ್ನು ಗಮನಿಸಿದ ಸಿದ್ದರಾಮಯ್ಯ ಅಭಿಮಾನಿಗಳ ಬಳಗವು ಪ್ರಜ್ವಲ್ ವಿರುದ್ಧ ಸೆನ್ ಪೊಲೀಸ್ ಠಾಣೆ ಮತ್ತು ಮೂಡಿಗೆರೆ ಪೊಲೀಸ್ ಠಾಣೆಗೆ ದೂರು ನೀಡಿದೆ.

ಫೇಸ್‍ಬುಕ್ ಮತ್ತು ಇನ್ಸ್ಟಾಗ್ರಾಮ್ ಪೇಜ್ಗಳಲ್ಲಿ ಮುಖ್ಯಮಂತ್ರಿ ಅವರಿಗೆ ಅವಹೇಳನ ಆಗುವ ರೀತಿ ಮತ್ತು ಸಮಾಜದ ಸ್ವಾಸ್ತ್ಯವನ್ನು ಹಾಳುಮಾಡುವ ರೀತಿ ಬಿಂಬಿಸುತ್ತಿದ್ದು, ಈ ವಿಚಾರಕ್ಕೆ ಕಾರಣರಾದವರ ಮೇಲೆ ಶಿಸ್ತುಕ್ರಮ ಕೈಗೊಳ್ಳಬೇಕಾಗಿ ಕೇಳಿಕೊಳ್ಳುತ್ತಿದ್ದೇವೆ ಎಂದು ಚಿಕ್ಕಮಗಳೂರು ಜಿಲ್ಲಾ ಸಿದ್ದರಾಮಯ್ಯ ಅಭಿಮಾನಿಗಳ ಬಳಗ ದೂರಿನಲ್ಲಿ ಮನವಿ ಮಾಡಿಕೊಂಡಿದೆ.

ಹಿಂದೂ ಸಾಮ್ರಾಜ್ಯ ಮೂಡಿಗೆರೆ ಫೇಸ್‍ಬುಕ್ ಪೇಜ್ ನಲ್ಲಿ ಅವಹೇಳನಕಾರಿ ಪೋಸ್ಟ್ ಸಂಬಂಧ ಸಿದ್ದರಾಮಯ್ಯ ಅಭಿಮಾನಿಗಳ ಬಳಗ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago