ಸೆ. 15 ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ; ಡಿಸಿ ಮೀನಾ ನಾಗರಾಜ್

0 36


ಚಿಕ್ಕಮಗಳೂರು: ಸೆಪ್ಟೆಂಬರ್ 15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.


ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯನ್ನು ಆಚರಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರವು ಸಮಾಜ ಕಲ್ಯಾಣ ಇಲಾಖೆಯ ಮೂಲಕ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯನ್ನು ಸೆಪ್ಟೆಂಬರ್ 15 ರಂದು ಆಚರಿಸಲಾಗುತ್ತಿದ್ದು, ಅಂದು ಬೆ. 10.00 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಸಾವಿರಾರು ವಿದ್ಯಾರ್ಥಿಗಳೊಂದಿಗೆ ಭಾರತ ಸಂವಿಧಾನದ ಪೀಠಿಕೆಯನ್ನು ಓದಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಸರ್ಕಾರದ ಅಧೀನದ ಸಂಸ್ಥೆ / ನಿಗಮ ಮಂಡಳಿ ಅಧಿಕಾರಿ, ಸಿಬ್ಬಂದಿ ಮತ್ತು ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಆನ್‌ಲೈನ್ ಮೂಲಕ ನೋಂದಣಿ ಮಾಡಿ ಭಾಗವಹಿಸಲು ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವ ಸಂಬಂಧ ಮತ್ತು ಸದರಿ ದಿನಾಂಕದಂದು ಜಿಲ್ಲಾ ಮಟ್ಟದಲ್ಲಿ, ತಾಲ್ಲೂಕು ಮಟ್ಟದಲ್ಲಿ, ಗ್ರಾಮ ಮಟ್ಟದಲ್ಲಿ, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲು ಹಾಗೂ ಕಾರ್ಯಕ್ರಮಕ್ಕೆ ಶಿಷ್ಟಾಚಾರದನ್ವಯ ಗಣ್ಯರನ್ನು ಆಹ್ವಾನಿಸುವ ಕುರಿತು ಯಾವುದೇ ಲೋಪವಾಗದಂತೆ ಕ್ರಮಕೈಗೊಳ್ಳಬೇಕೆಂದು ಸೂಚಿಸಿದರು.


ನಗರದ ತಾಲ್ಲೂಕು ಕಛೇರಿಯಿಂದ ಗಣ್ಯರು ಎಲ್ಲ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ವಿವಿಧ ಕಲಾತಂಡಗಳೊಂದಿಗೆ ಎಂ.ಜಿ. ರಸ್ತೆ ಮುಖಾಂತರ ಜಾಥಾ ಹೊರಟು ವೇದಿಕೆ ಕಾರ್ಯಕ್ರಮ ನಡೆಯುವ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಸೇರಲು ತೀರ್ಮಾನಿಸಲಾಯಿತು.
ಸಂವಿಧಾನದ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಸಂಬಂಧ ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ನಡೆಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡುವಂತೆ ಸೂಚಿಸಿದರು. ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಿ ಕಾರ್ಯಕ್ರಮ ಯಶ್ವಸಿಗೊಳಿಸುವಂತೆ ತಿಳಿಸಿದರು.


ಸಭೆಯಲ್ಲಿ ನಗರ ಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಯೋಗೀಶ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಸೋಮಶೇಖರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ವಕೀಲರ ವಿವಿದೋದ್ದೇಶ ಸಹಕಾರ ಸಂಘ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ :

ಚಿಕ್ಕಮಗಳೂರು: ಚಿಕ್ಕಮಗಳೂರು ವಕೀಲರ ವಿವಿದೋದ್ದೇಶ ಸಹಕಾರ ಸಂಘ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಂಘ ದ ಅಧ್ಯಕ್ಷ ವಿ.ವಿ.ಕೆಂಚೆಗೌಡ ತಿಳಿಸಿದರು.


ಶುಕ್ರವಾರ ನಗರದ ಟೌನ್ ಮಹಿಳಾ ಸಮಾಜ ಸವೂರ್ ಸಭಾಂಗಣದಲ್ಲಿ ನಡೆದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ವಕೀಲರ ಕ್ಷೇಮಾಭಿವೃದ್ದಿ ದೃಷ್ಟಿಯಿಂದ ವಕೀಲರ ವಿವಿದೋದ್ದೇಶ ಸಹಕಾರ ಸಂಘವನ್ನು ಸ್ಥಾಪಿಸಿದ್ದು, ಉತ್ತಮವಾಗಿ ಕಾರ್ಯನಿರ್ವಹಿ ಸುತ್ತಿದೆ. ಸಂಘವೂ ಲಾಭದಲ್ಲಿ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ವಕೀಲ ಕ್ಷೇಮಾಭಿವೃದ್ದಿ ದೃಷ್ಟಿಯಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.


ಈ ವೇಳೆ ಸಂಘದ ನಿರ್ದೇಶಕರಾದ ಎಚ್.ಎಚ್.ಕೃಷ್ಣಮೂರ್ತಿ, ಬಿ.ಭರತ್‌ಕುಮಾರ್, ಎಂ.ಎA.ಮಹೇಶ್, ಕೆ.ಎಸ್.ಶರತ್‌ಚಂದ್ರ, ಕೆ.ಬಿ. ನಂದೀಶ್, ಡಿ.ಸಿ.ಪುಟ್ಟೇ ಗೌಡ, ಬಿ.ಎಸ್.ಯೋಗೀಶ್, ಡಿ.ಎಸ್.ಮಮತ, ಎಸ್.ಗಾಯತ್ರಿ ಇದ್ದರು. ಸಂಘದ ಉಪಾಧ್ಯಕ್ಷೆ ಸಿ.ವಿ.ಹರ್ಷ ಸ್ವಾಗತಿಸಿದರು. ಎಚ್.ಇ.ದೊಡ್ಡಯ್ಯ ವಂದಿಸಿದರು.

Leave A Reply

Your email address will not be published.

error: Content is protected !!