ಹೋಟೆಲ್‌ಗಳ ಮೇಲೆ ಪೊಲೀಸರ ದಾಳಿ ; ಮಟನ್ ಎಂದು ಗೋಮಾಂಸದ ಊಟ ಸರ್ವ್ ಮಾಡುತ್ತಿದ್ದವರ ಬಂಧನ !

0 65

ಚಿಕ್ಕಮಗಳೂರು: ನಗರದ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ ಮಾಡಿ ಪೊಲೀಸರು ಗೋಮಾಂಸದ ಖಾದ್ಯ ವಶಪಡಿಸಿಕೊಂಡಿದ್ದಾರೆ.

ನಗರದ ಬೆಂಗಳೂರು ಹೋಟೆಲ್, ಎವರೆಸ್ಟ್ ಹೋಟೆಲ್‌ಗಳು ಮಟನ್ ಬದಲು ಗೋಮಾಂಸದ ಖಾದ್ಯಗಳನ್ನ ನೀಡುತ್ತಿದ್ದವು ಎಂಬ ಆರೋಪ ಕೇಳಿಬಂದಿದೆ. ಸದ್ಯ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಎವರೆಸ್ಟ್ ಹೋಟೆಲ್ ಮಾಲೀಕ ಲತೀಫ್ ಮತ್ತು ಬೆಂಗಳೂರು ಹೋಟೆಲ್ ಮಾಲೀಕ ಶಿವರಾಜ್ ಅವರನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಚಿಕ್ಕಮಗಳೂರು ನಗರದ ಅಂಬೇಡ್ಕರ್ ರಸ್ತೆಯಲ್ಲಿರುವ ನ್ಯಾಮತ್ ಹೋಟೆಲ್‌ನಲ್ಲಿ ಸಂಗ್ರಹಿಸಲಾಗಿದ್ದ 20 ಕೆಜಿ ಗೋಮಾಂಸವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸತೀಶ್ ನೇತೃತ್ವದಲ್ಲಿ ದಾಳಿ ನಡೆದಿದೆ. ಹೊಟೇಲ್ ಮಾಲೀಕ ಇರ್ಷಾದ್ ಅಹಮದ್ ನನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

2021ರಲ್ಲಿ ಅಂದಿನ ಬಿಜೆಪಿ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ಈ ಕಾಯ್ದೆ ಪ್ರಕಾರ ಸಾಗಣೆ, ವಧೆ ಮತ್ತು ವ್ಯಾಪಾರವು ಕಾನೂನುಬಾಹಿರವಾಗಿದೆ.

Leave A Reply

Your email address will not be published.

error: Content is protected !!