ಚಿಕ್ಕಮಗಳೂರು : ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮೂಡಿಗೆರೆ ಅಂಗಡಿ ಗ್ರಾಮದ ನಕ್ಸಲ್ ಸುರೇಶ್ ಅಲಿಯಾಸ್ ಮಹದೇವ ಕೇರಳದ ಕಣ್ಣೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗುತ್ತಿದೆ.
ಕಾಡಾನೆ ದಾಳಿಗೆ ಒಳಗಾಗಿ ಗಾಯಗೊಂಡ ಸುರೇಶ್ ನನ್ನು ಚಿಕಿತ್ಸೆ ಕೊಡಿಸಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಮಲೆನಾಡಿನ ನಕ್ಸಲ್ ಚಳುವಳಿ ಪ್ರಮುಖರಲ್ಲಿ ಒಬ್ಬರಾಗಿದ್ದ ಅವರು ತಲೆಮರೆಸಿಕೊಂಡು ಕೇರಳದ ಓಡಾಡಿಕೊಂಡಿದ್ದರು. ಕಾಡಾನೆ ದಾಳಿಗೆ ಒಳಗಾಗಿ ಗಾಯಗೊಂಡು ಬಿದ್ದಿದ್ದ ಸುರೇಶ್ ನನ್ನು ಮೊದಲು ಚಿಕಿತ್ಸೆ ಕೊಡಿಸಿದ ಪೊಲೀಸರು ನಂತರ ವಿಳಾಸ ವಿಚಾರಣೆ ಮಾಡಿದ ವೇಳೆ ಈತ ನಕ್ಸಲ್ ಎಂದು ತಿಳಿದು ಬಂದಿದೆ.
ಮೂಲತಃ ಮೂಡಿಗೆರೆ ತಾಲೂಕಿನ ಗೋಣಿಬೀಡಿನ ಅಂಗಡಿ ಗ್ರಾಮದ ಸುರೇಶ್ ಇಪ್ಪತ್ತು ವರ್ಷಗಳಿಂದ ಕಣ್ಮರೆಯಾಗಿ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದ, ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಹತ್ತಕ್ಕೂ ಹೆಚ್ಚು ನಕ್ಸಲೀಯ ಕೃತ್ಯ ಪ್ರಕರಣ ಈತನ ಮೇಲಿದ್ದು, ಸರ್ಕಾರ ಈತನನ್ನು ಹಿಡಿದು ಕೊಟ್ಟವರಿಗೆ 5 ಲಕ್ಷ ರೂ. ಬಹುಮಾನ ಸಹ ಘೋಷಿಸಲಾಗಿತ್ತು. ಜಿಲ್ಲೆಯಲ್ಲಿ ಈತನ ಮೇಲೆ ಪ್ರಕರಣಗಳಿರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಕರೆತರುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…