ಮೂಡಿಗೆರೆ : ಚಾಲಕನ ನಿಯಂತ್ರಣ ತಪ್ಪಿ ಕಾರುವೊಂದು 30 ಅಡಿ ಆಳದ ಕಂದಕಕ್ಕೆ ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ನ ಮಲಯಮಾರುತ ಸಮೀಪದಲ್ಲಿ ನಡೆದಿದೆ.
ಮೇಲಿಂದ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ನಜ್ಜು-ಗುಜ್ಜಾಗಿದೆ. ಕಾರಿನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯವಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆರು ಮಂದಿ ಪ್ರವಾಸಿಗರು ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ಹೊರಟ್ಟಿದ್ದರು. ಈ ವೇಳೆ ತಡೆಗೋಡೆ ಇಲ್ಲದ ಕಾರಣಕ್ಕೆ ತಿರುವಿನಲ್ಲಿ ಚಾಲಕ ನಿಯಂತ್ರಣ ಕಳೆದುಕೊಂಡಿದ್ದ. ಹೀಗಾಗಿ ಏಕಾಏಕಿ ಕಾರು ಕಂದಕ್ಕೆ ಬಿದ್ದಿತ್ತು.
ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂದಕ್ಕೆ ಬಿದ್ದಿದ್ದ ಕಾರನ್ನು ಮೇಲೆತ್ತುವ ಕೆಲಸವನ್ನು ಮಾಡಿದ್ದಾರೆ.
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…
ರಿಪ್ಪನ್ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…
ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…
ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…