4 ವರ್ಷ ಪ್ರೀತಿಸಿದ್ಲು, ಮದ್ವೆಯಾದ ಮೂರೇ ದಿನಕ್ಕೆ ತವರುಮನೆ ಸೇರಿಬಿಟ್ಲು, ಮನನೊಂದ ರಾಷ್ಟ್ರೀಯ ಕಬಡ್ಡಿ ಆಟಗಾರ ಮಸಣ ಸೇರಿದ !

ಚಿಕ್ಕಮಗಳೂರು: ರಾಷ್ಟ್ರಮಟ್ಟದ ಕಬಡ್ಡಿ ಆಟಗಾರನೋರ್ವ ಕೌಟುಂಬಿಕ ಸಮಸ್ಯೆ ಕಾರಣದಿಂದ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಹೊರವಲಯದ ತೇಗೂರು ಗ್ರಾಮದಲ್ಲಿ ನಡೆದಿದೆ.

ವಿನೋದ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ತೇಗೂರು ಗ್ರಾಮದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಯತ್ನಿಸಿದ್ದ ವಿನೋದ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ಪ್ರೀತಿಸಿ ಮದುವೆಯಾದ ಮೂರೇ ದಿನಕ್ಕೆ ಹೆಂಡತಿ ಬಿಟ್ಟು ಹೋದಳೆಂದು ಮನನೊಂದ ವಿನೋದ್ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ತೇಗೂರು ಗ್ರಾಮದ ತನುಜಾ ಎಂಬ ಯುವತಿ ಹಾಗೂ ವಿನೋದ್ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಇವರ ಪ್ರೀತಿಗೆ ಯುವತಿ ಮನೆಯವರ ಸಮ್ಮತಿ ಇರಲಿಲ್ಲ. ಹೀಗಾಗಿ ಯುವತಿ ಮನೆಯವರ ವಿರೋಧದ ನಡುವೆಯೇ ಇಬ್ಬರೂ ಓಡಿ ಹೋಗಿ ಮದುವೆಯಾಗಿದ್ದರು. ಡಿಸೆಂಬರ್ 10 ರಂದು ವಿನೋದ್ ಹಾಗೂ ತನುಜಾ ಮದುವೆಯಾಗಿದ್ದರು.

ಇನ್ನೇನು ಪರಸ್ಪರ ಪ್ರೀತಿ ಮಾಡಿದ್ದ ಜೋಡಿ ಹಕ್ಕಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟು ಸಂಸಾರ ಶುರು ಮಾಡುವ ಹೊತ್ತಲ್ಲೇ ಪೊಲೀಸರು ನವ ಜೋಡಿಯನ್ನು ಠಾಣೆಗೆ ಕರೆ ತಂದಿದ್ದರು. ಯುವತಿಯ ಕುಟುಂಬಸ್ಥರ ದೂರಿನ ಮೇರೆಗೆ ಠಾಣೆಯಲ್ಲಿ ಪಂಚಾಯಿತಿ ನಡೆದಿದ್ದು ಯುವತಿ ತನ್ನ ತಾಯಿ ಮನೆಗೆ ಹೋಗುವುದಾಗಿ ಹೇಳಿಕೆ ನೀಡಿದ್ದಳು.

ಮದುವೆಯಾದ ಮೂರೇ ದಿನ ಗಂಡನನ್ನು ಬಿಟ್ಟು ತಾಯಿ ಜೊತೆ ಹೋಗುವುದಾಗಿ ಹೇಳಿ ಯುವತಿ ಉಲ್ಟಾ ಹೊಡೆದಿದ್ದಾಳೆ. ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago