Udupi – Chikkamagaluru Loksabha Constituency | ಆರಂಭದಲ್ಲೇ ಕೈಕೊಟ್ಟ ಇವಿಎಂ, ಮತದಾನ ಸ್ಥಗಿತ

0 272

ಚಿಕ್ಕಮಗಳೂರು : ದೇಶದಲ್ಲಿ 18ನೇ ಸಾರ್ವತ್ರಿಕ ಚುನಾವಣೆಯ ಕಾವು ಹೆಚ್ಚಾಗುತ್ತಿದ್ದು, ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ.

ಎರಡನೇ ಹಂತದಲ್ಲಿ ಒಟ್ಟು 13 ರಾಜ್ಯಗಳ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಕರ್ನಾಟಕದಲ್ಲಿ ಇದು ಮೊದಲ ಹಂತದ ಮತದಾನವಾಗಿದೆ.

ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ.

ಮತದಾನ ಮಾಡಲು ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ-ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ಇನ್ನು ರಾಜ್ಯದ ಹಲವೆಡೆ ಮತಯಂತ್ರವು ಆರಂಭದಲ್ಲೇ ಕೈಕೊಟ್ಟಿದ್ದು, ಕೆಲಕಡೆ ವೋಟಿಂಗ್​ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಕೈಕೊಟ್ಟ ಇವಿಎಂ:
ಚಿಕ್ಕಮಗಳೂರಿನ ಆರೆನೂರು ಗ್ರಾಮದ ಮತಗಟ್ಟೆ ಸಂಖ್ಯೆ 53 ರಲ್ಲಿ ಇವಿಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತಗೊಂಡಿತು. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾದಗಿ ಕೆಲವೇ ನಿಮಿಷಗಳಲ್ಲಿ ಮತದಾನ ಸ್ಥಗಿತಗೊಂಡಿದೆ. ಆರೆನೂರು ಗ್ರಾಮದ ಮತಗಟ್ಟೆ ಸಂಖ್ಯೆ 53 ರಲ್ಲಿ ಮತದಾನ ಸ್ಥಗಿತಗೊಂಡಿದ್ದು, ಮತದಾನಕ್ಕಾಗಿ ಮತದಾರರು ಸರದಿಯಲ್ಲಿ ಕಾದು ನಿಂತ ದೃಶ್ಯಗಳು ಕಂಡುಬಂದವು.

Leave A Reply

Your email address will not be published.

error: Content is protected !!